Thursday, September 29, 2022

ಮುಂದಿನ ವಾರದಿಂದ ಹಿಜಾಬ್‌ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್‌ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.


ಹಿಜಾಬ್‌ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು ಇಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ ಅವರೆದುರು ಪ್ರಕರಣವನ್ನು ಪ್ರಸ್ತಾಪಿಸಿದರು. “ಹೆಣ್ಣುಮಕ್ಕಳು ವ್ಯಾಸಂಗದಿಂದ ವಂಚಿತರಾಗಿದ್ದಾರೆ.

ಪ್ರಕರಣವನ್ನು ಬಹಳ ಹಿಂದೆಯೇ ದಾಖಲಿಸಲಾಗಿದೆ” ಎಂದು ಪ್ರಶಾಂತ್‌ ಭೂಷಣ್‌ ತಿಳಿಸಿದಾಗ ಸಿಜೆಐ “ಮುಂದಿನ ವಾರದಲ್ಲಿ ಯಾವಾಗಲಾದರೂ ವಿಚಾರಣೆಗೆ ಪಟ್ಟಿ ಮಾಡಲಾಗುವುದು” ಎಂದು ಪ್ರತಿಕ್ರಿಯಿಸಿದರು.
ಮೇಲ್ಮನವಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಕಳೆದ ಮಾರ್ಚ್‌ನಲ್ಲಿ ನಿರಾಕರಿಸಿತ್ತು. ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಪರಿಣಾಮಕಾರಿ ಅಧಿಕಾರ ನೀಡುವ ಕರ್ನಾಟಕ ಸರ್ಕಾರದ ಆದೇಶವನ್ನು ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು.

LEAVE A REPLY

Please enter your comment!
Please enter your name here

Hot Topics

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...