Friday, July 1, 2022

ಹಿಜಾಬ್ ತೀರ್ಪು: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ- ಮಾ.19ರವೆಗೆ 144 ಸೆಕ್ಷನ್ ಜಾರಿ

ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್‌ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.


ಈ ಬಗ್ಗೆ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ “ಎಲ್ಲ ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ನಡೆಯಬೇಕಿದ್ದ ಎಲ್ಲಾ ಬಗೆಯ ಆಂತರಿಕ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಲಾಗಿದೆ.

ಆದರೆ ಪೂರ್ವ ನಿಗದಿತ ಬಾಹ್ಯ ಪರೀಕ್ಷೆಗಳು ಮಾತ್ರ ಜಿಲ್ಲೆಯಲ್ಲಿ ನಡೆಯಲಿವೆ. ಕರ್ನಾಟಕಾ ಪರೀಕ್ಷಾ ಪ್ರಾಧಿಕಾರದಿಂದ ನಡೆಯಲಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಪರೀಕ್ಷೆಗಳು ಯಥಾ ಪ್ರಕಾರ ನಡೆಯಲಿವೆ’ ಎಂದು ತಿಳಿಸಿದ್ದಾರೆ.

ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲಾದ್ಯಂತ ನಿಷೇಧಾಜ್ಞೆಯನ್ನೂ ವಿಧಿಸಲಾಗಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ವಹಿಸುವಂತೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲೂ ಇಂದಿನಿಂದ ಮಾರ್ಚ್ 19 ರ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ.

ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಕೂಡ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಶಾಲಾ‌‌ ಕಾಲೇಜುಗಳಿಗೆ ರಜೆ ಇದ್ದರೂ ಪರೀಕ್ಷೆ ನಡೆಸಲು ವಿನಾಯಿತಿ ನೀಡಿದೆ.

ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ‌ ನಿಷೇದಾಜ್ಞೆ ಹೇರಿದೆ. ನಿಷೇದಾಜ್ಞೆ ಹಿನ್ನೆಲೆ ಸಂಭ್ರಮಾಚರಣೆ, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಸಭೆ ಸಮಾರಂಭಕ್ಕೆ ಬ್ರೇಕ್ ನೀಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

 

 

 

 

 

LEAVE A REPLY

Please enter your comment!
Please enter your name here

Hot Topics

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಮೂಡುಬಿದಿರೆ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು.ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್,...