Connect with us

    LATEST NEWS

    ಮಂಗಳೂರು: ‘ಒಂದು ವಾರದೊಳಗೆ ನಿನ್ನ ಗೇಮ್ ಫಿನಿಶ್’- ಹಿಜಾಬ್‌ ವಿರೋಧಿಸಿದ ವಿದ್ಯಾರ್ಥಿಗೆ ಜೀವಬೆದರಿಕೆ

    Published

    on

    ಮಂಗಳೂರು: ಹಿಜಾಬ್ ವಿಚಾರದಲ್ಲಿ ಸಂಘರ್ಷಕ್ಕಿಳಿದ ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿ ಸಾಯಿ ಸಂದೇಶ್​ಗೆ ಬೆದರಿಕೆ ಕರೆಗಳು ಬಂದಿವೆ. ಈತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯಲ್ಲಿ ಸಕ್ರಿಯನಾಗಿದ್ದಾತ.

    ವಿದೇಶಿ ಕಾಲ್, ಇನ್​ಸ್ಟಾಗ್ರಾಮ್ ಮತ್ತು ವಾಟ್ಸ್ಯಾಪ್ ಮೂಲಕ ಹತ್ತಾರು ಬೆದರಿಕೆ ಕರೆಗಳು ಬಂದಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

    ‘ನಿನ್ನ ಫುಲ್ ಡಿಟೈಲ್ಸ್​ ಸಿಕ್ಕಿದೆ, ಎಲ್ಲಿಂದ ಬರ್ತೀಯಾ, ಎಲ್ಲಿಂದ ಹೋಗ್ತೀಯಾ ಅನ್ನೋದು ಗೊತ್ತಾಗಿದೆ. ನಿನ್ನ ತಾಯಿ ಪತಿವ್ರತೆ ಆಗಿದ್ರೆ ನಮ್ಮ ಕೈಯಿಂದ ತಪ್ಪಿಸು ನೋಡುವ…

    ಒಂದು ವಾರದೊಳಗೆ ನಿನ್ನ ಗೇಮ್ ಫಿನಿಶ್ ಮಾಡುತ್ತೇವೆ. ನೀನು ಜಾಸ್ತಿ ದಿನ ಇರಲ್ಲ, ಜೀವದ ಮೇಲೆ ಆಸೆ ಬಿಟ್ಟು ಬಿಡು’ ಅಂತೆಲ್ಲಾ ಮೆಸೇಜ್​ಗಳು ಬಂದಿವೆ.

    ಹಿಜಾಬ್ ವಿಚಾರವಾಗಿ ಮಾರ್ಚ್‌ 4ರಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

    ಪರೀಕ್ಷೆಗೆ ಹಾಜರಾಗಲು ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಸಾಯಿ ಸಂದೇಶ್ ಮತ್ತು ಕೆಲ ವಿದ್ಯಾರ್ಥಿಗಳು ಪ್ರಶ್ನಿಸಿದ್ದರು.

    ಈ ವೇಳೆ ಸಾಯಿ ಸಂದೇಶ್​ಗೆ ‘ಕಾಲೇಜ್ ನಿನ್ನ ಅಪ್ಪಂದಾ’ ಎಂದು ವಿದ್ಯಾರ್ಥಿನಿ ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಸಾಯಿ ಸಂದೇಶ್‌ ಕೂಡಾ ಮತ್ತೇನು ನಿನ್ನ ಅಪ್ಪಂದಾ ಎಂದು ತಿರುಗೇಟು ನೀಡಿದ್ದರು.

    ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಬಿವಿಪಿ ಕಾರ್ಯಕರ್ತನೂ ಆಗಿರುವ ವಿದ್ಯಾರ್ಥಿ ಸಾಯಿ ಸಂದೇಶ್​ಗೆ ಕೊಲೆ ಬೆದರಿಕೆ ಬಂದಿದೆ.

    ಇದೀಗ ಕಾಲೇಜಿನಲ್ಲಿ ಹಿಜಾಬ್‌ ವಿವಾದ, ವಿದ್ಯಾರ್ಥಿಗಳ ನಡುವಿನ ವೈಷಮ್ಯ, ಠಾಣೆಗೆ ಮೆಟ್ಟಲೇರಿರುವ ಪ್ರಕರಣ ಇತ್ಯಾದಿ ವಿಚಾರಗಳಿಂದಾಗಿ ಕಾಲೇಜಿನ ಆಡಳಿತ ಮಂಡಳಿ ಕಾಲೇಜಿಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಣೆ ಮಾಡಿದೆ.

    ಈ ಘಟನೆಗೆ ಸಂಬಂಧಿಸಿ ತನಗೆ ಕಿರುಕುಳ ನೀಡಿ ಹಲ್ಲೆಗೆ ಮುಂದಾಗಿದ್ದಾರೆ. ನನ್ನನ್ನು ಭಯೋತ್ಪಾದಕಿ ಎಂದು ಬೈದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳಾದ ಸಾಯಿ ಸಂದೇಶ್‌, ಸುಮಂತ್‌ ಆಳ್ವ, ನಿತೇಶ್ ಸೇರಿ 15 ಮಂದಿ ವಿರುದ್ಧ ವಿದ್ಯಾರ್ಥಿನಿ ಆಯುಬ್‌ ಶೇಖ್ ಬಂದರು ಠಾಣೆಗೆ ಪ್ರತ್ಯೇಕ ದೂರು ನೀಡಿದ್ದಾರೆ.

    ಕಾಲೇಜಿನಲ್ಲಿ ಹಿಜಾಬ್‌ ವಿವಾದದ ಬಗ್ಗೆ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್‌ಗೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಸೂಚನೆ ನೀಡಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending