ನವದೆಹಲಿ: ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ಸದ್ಯ ಇದರ ವಿಚಾರಣೆ ನ್ಯಾಯಮೂರ್ತಿಗಳ ಅನಾರೋಗ್ಯದಿಂದಾಗಿ ವಿಳಂಬವಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ.
ಇಂದು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಅವರು ಪ್ರಕರಣವನ್ನು ವಿಚಾರಣೆಗಾಗಿ ಪಟ್ಟಿ ಮಾಡುವಂತೆ ಸಿಜೆಐ ಅವರನ್ನು ಕೋರಿದರು. ಈ ವೇಳೆ ಪ್ರತಿಕ್ರಿಯಿಸಿದ ಸಿಜೆಐ ನ್ಯಾಯಮೂರ್ತಿಗಳಲ್ಲಿ ಒಬ್ಬರು ಅಸ್ವಸ್ಥರಾಗಿದ್ದಾರೆ ಆದ್ದರಿಂದ ಈಗ ವಿಚಾರಣೆ ಸಾಧ್ಯವಿಲ್ಲ. ಜೊತೆಗೆ ಈ ಪ್ರಕರಣದ ವಿಚಾರಣೆಗೆ ಪೀಠ ರಚಿಸಬೇಕಿದೆ ಎಂದರು.
ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಒಂದು ಅರ್ಜಿ ಸೇರಿದಂತೆ ಮೂರು ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.