Friday, August 19, 2022

ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ- ವಿದ್ಯಾರ್ಥಿನಿಯರಿಗೆ ನೊಟೀಸ್​ ಜಾರಿ

ಮಂಗಳೂರು: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರಾಂಶುಪಾಲೆ ನೊಟೀಸ್​ ಜಾರಿ ಮಾಡಿದ್ದಾರೆ.


ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿ.ವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ನೋಟೀಸ್ ಜಾರಿ ಮಾಡಿದ್ದಾರೆ.

ಕಳೆದ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಹಿಜಾಬ್‌ ಧಾರಿಣಿಯರು ಗಡುವು ನೀಡಿದ ಬೆನ್ನಲ್ಲೇ ಇಂದು ನೊಟೀಸ್​ ನೀಡಿ ಎಚ್ಚರಿಕೆ ನೀಡಿದ್ದಾರೆ.

ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ್ದೀರಿ, ಕಾಲೇಜಿನ ವಿರುದ್ದವಾಗಿ, ಪ್ರಾಂಶುಪಾಲರ ವಿರುದ್ಧ ಕೆಲ ಹೇಳಿಕೆ ನೀಡಿ,

ಈ ರೀತಿಯ ಹೇಳಿಕೆ ನೀಡಿ ಕಾಲೇಜಿನ ಘನತೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ನೊಟೀಸ್​​ನಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ವರ್ತನೆ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದೂ ಪ್ರಶ್ನಿಸಲಾಗಿದ್ದು,

ಈ ಬಗ್ಗೆ ಸಮಜಾಯಿಷಿ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.
ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಸೇರಿ ಇತರ ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಲಾಗಿದ್ದು, ಮೊದಲ ಹಂತವಾಗಿ ನೊಟೀಸ್​ ನೀಡಲಾಗಿದೆ.

ಈ ಬಳಿಕವೂ ನಿಯಮ ಮೀರಿದರೆ ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...