Friday, August 19, 2022

ವಿವಿ ಕಾಲೇಜು ಆಡಳಿತದ ಆದೇಶಕ್ಕೆ ಕ್ಯಾರೇ ಅನ್ನದೇ ಮತ್ತೆ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ತಲೆ ಎತ್ತಿದ ಹಿಜಾಬ್‌. ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್‌ ವಾರ್‌ ಇಂದೂ ಮುಂದುವರೆದಿದೆ.


ಇಂದೂ ಸಹ ಮಂಗಳೂರು ವಿವಿ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಇಂದು ಶಾಲೆಗೆ ಆಗಮಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಭಾರ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ.

ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ.

ನಿನ್ನೆ ಶಾಸಕ ವೇದವ್ಯಾಸ್‌ ಕಾಮತ್‌, ಮಂಗಳೂರು ವಿವಿ ಕುಲಪತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಲೇಜು ತರಗತಿ ಮತ್ತು ಆವರಣದಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದನ್ನು ವಿರೋಧಿಸಿ ಹಿಜಾಬ್‌ ವಿದ್ಯಾರ್ಥಿನಿಯರು ಮತ್ತೆ ಕಾಲೇಜಿಗೆ ಬಂದಿದ್ದಾರೆ. ಇನ್ನು ಮತ್ತೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...