Connect with us

LATEST NEWS

ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಅಂತಿಮ ಘಟ್ಟಕ್ಕೆ : ನಾಳೆ ಬೆಳಿಗ್ಗೆ ಹೈಕೋಟ್‌ ನಿಂದ ಅಂತಿಮ ತೀರ್ಪು ಪ್ರಕಟ..!

Published

on

ಬೆಂಗಳೂರು : ದೇಶದ್ಯಾಂತ ಭಾರೀ ಸುದ್ದಿಯಾಗಿ, ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಹಿಜಾಬ್​ ಪ್ರಕರಣ ಅಂತಿಮಘಟ್ಟ ತಲುಪಿದೆ.

ಹಿಜಾಬ್​ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್​ನಲ್ಲಿ ಅಂತಿಮ ತೀರ್ಪು ಹೊರಬೀಳಲಿದೆ. ಬೆಳಗ್ಗೆ 10.30ಕ್ಕೆ ಹಿಜಾಬ್​ ವಿವಾದದ ಕುರಿತು ತೀರ್ಪು ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್​ ತಿಳಿಸಿದೆ.

ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ತೀರ್ಪು ನೀಡಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11 ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಕಾಯ್ದಿರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್​​ ವಿಚಾರಣೆ ನಡೆಸಿತ್ತು. ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದವನ್ನು ಮಂಡಿಸಿದ್ರು.
ಹಿಜಾಬ್​ ಪ್ರಕರಣ ಹಿನ್ನೆಲೆ :
ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್​ ನಿರ್ಬಂಧಿಸುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆ ಹಿಜಾಬ್​ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ರು.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.

ಈ ಹಿಂದೆ ಹೈಕೋರ್ಟ್‌ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು.

ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆಗಳು ನಡೆದಿದ್ದವು.

ಕುತೂಹಲ ಮೂಡಿಸಿದ ಕೋರ್ಟ್ ತೀರ್ಪು
ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತ್ತಿದ್ದು, ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು ನಾಳೆ ಹಿಜಾಬ್​ ತೀರ್ಪು ಹಿನ್ನೆಲೆ ಹೈಕೋರ್ಟ್ ಸುತ್ತಮುತ್ತ ಬಂದೋಬಸ್ತ್ ಗೆ ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಗೆ ಸೂಚನೆ ನೀಡಲಾಗಿದೆ,

ಅಂಬೇಡ್ಕರ್ ಗೇಟ್, ಡೈಮಂಡ್ ಜೂಬ್ಲಿ ಗೇಟ್, ಮಹಾರಾಣಿ ಜಂಕ್ಷನ್ ಬಳಿ ಬಂದೋಬಸ್ತ್ ಮಾಡೋದಾಗಿ ಡಿಸಿಪಿ ಅನುಚೇತ್ ಸಭೆಯಲ್ಲಿ ತಿಳಿಸಿದ್ದಾರೆ. ಹಿಜಾಬ್ ಗೆ ಸಂಬಂಧಿಸಿದಂತೆ ಮುಂಜಾಗೃತ ಕ್ರಮಗಳನ್ನ ತಗೆದುಗೊಳ್ಳಲಾಗಿದೆ.

ಇಂದಿನಿಂದ ನಿಷೇದಾಜ್ಙೆ 144 ಸೆಕ್ಷನ್​. ಒಂದು ವಾರಗಳ ಕಾಲ ಜಾರಿಯಿದೆ. ನಾಳೆಯಿಂದ 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

ಯಾವುದೇ ಪ್ರತಿಭಟನೆಗೆ ಅವಕಾಶವಿರೊದಿಲ್ಲ. ಹೆಚ್ಚುವರಿಯಾಗಿ ಕೆಎಸ್ ಆರ್​ಪಿ ತುಕಡಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಸೂಕ್ಷ್ಮ ಪ್ರದೇಶಗಳನ್ನ ಗುರುತಿಸಿ ಬಂದೋಬಸ್ತ್ ಮಾಡಲಾಗುತ್ತೆ.

ಬೆಂಗಳೂರು ಜನತೆ ಇಲ್ಲಿವರೆಗೂ ನಮಗೆ ಸಹಕಾರ ನೀಡಿದ್ದೀರಿ ಮುಂದಿನಗಳಲ್ಲೂ ನೀಡಿ ಅಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಾ.15ರಂದು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಾ.15ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

 

 

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending