BANTWAL
ಬಂಟ್ವಾಳ ನೇತ್ರಾವತಿ ನದಿಯಲ್ಲಿ ಹಿಂದು ಕಾರ್ಯಕರ್ತನ ಶವ ಪತ್ತೆ – ಸಾವಿನ ಬಗ್ಗೆ ಹಲವು ಶಂಕೆ..!!
ಕಲಡ್ಕ ಪ್ರಖಂಡದ ಗೋರಕ್ಷಕ ಪ್ರಾಮುಖ್ ಹಾಗೂ ಸಜೀಪ ವಿಶ್ವ ಹಿಂದೂ ಪರಿಷತ್‌ನ ಸಕ್ರಿಯ ಕಾರ್ಯಕರ್ತ ರಾಜೇಶ್ ಸಾನದಮನೆ ಇವರ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬಂಟ್ವಾಳ: ಕಲಡ್ಕ ಪ್ರಖಂಡದ ಗೋರಕ್ಷಕ ಪ್ರಾಮುಖ್ ಹಾಗೂ ಸಜೀಪ ವಿಶ್ವ ಹಿಂದೂ ಪರಿಷತ್‌ನ ಸಕ್ರಿಯ ಕಾರ್ಯಕರ್ತ ರಾಜೇಶ್ ರ್ಣ ಸಾನದಮನೆ ಇವರ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್ ಸಾbantwalaನದ ಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ.
ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.
ರಾಜೇಶ್ ಪಯಣಿಸುತ್ತಿದ್ದ ಬೈಕ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ರಾಜೇಶ್ ನದಿಗೆ ಎಸೆಯಲ್ಪಟ್ಟಿರಬಹುದೇ ಎಂಬ ಅನುಮಾನಗಳೂ ವ್ಯಕ್ತವಾಗಿದೆ. ಇದೀಗ ಬಂಟ್ವಾಳ ನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
BANTWAL
ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್‌ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಬರುತ್ತಿರುವಾಗ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಹಾಗೂ ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್‌ರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!
ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅದ್ದೂರಿಯಾಗಿ ಆಚರಿಸಿದರು. ಪ್ರಚೋದನಕಾರಿ ಹೇಳಿಕೆಯಿಂದ ಸಂಘಪರಿವಾರದ ಕಾರ್ಯಕರ್ತರು ಬಿಸಿ ರೋಡಿನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.
ಇದೆಲ್ಲದರ ನಡುವೆ ಮಾಣಿಯಲ್ಲಿ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆಗೆ ಪಾತ್ರರಾದರು.
ಅಲ್ಲದೆ ಅಂತ್ಯದಿನದವರೆಗೂ ನಮ್ಮ ಊರಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಲ್ಲಲಿ ಎಂದು ಹಾರೈಸಿದರು.
BANTWAL
ಬಿ.ಸಿ.ರೋಡ್‍ನಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು: ಸದ್ಯ ಪರಿಸ್ಥಿತಿ ಶಾಂತ
ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.
ಪೊಲೀಸರು ಬಿ.ಸಿ.ರೋಡ್‍ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಂಘ ಪರಿವಾರದ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ.
- DAKSHINA KANNADA6 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS3 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news3 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY6 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ