Tuesday, January 31, 2023

ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಹಿಂದೂ ಮುಖಂಡ..! ಪುನೀತ್ ಅತ್ತಾವರ ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ.


ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್ ಬುಕ್ ಮತ್ತು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು ಭಾರಿ ವಿವಾದ ಸೃಷ್ಟಿಸಿದೆ.

‘ಪದೇ ಪದೇ ಹೇಳುತ್ತಿದ್ದೇವೆ, ಹಿಂದೂ ಹುಡುಗಿಯರ ಜೊತೆ ತಿರುಗಬೇಡಿ’ ‘ಲವ್ ಜಿಹಾದ್ ಮಾಡಿ ಹಿಂದೂ ಹುಡುಗಿಯರ ಬಾಳು ಹಾಳು ಮಾಡಬೇಡಿ’ ‘ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ’ ‘ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ನಿಮಗೆ ಮಯ್ಯತ್(ಮರಣ) ಶತಸಿದ್ದ’ ಹೀಗೆ ವೈರಲ್ ಆದ ಪೋಸ್ಟರ್ ನಲ್ಲಿ ಮರಣದ ಹೇಳಿಕೆ ದಾಖಲಿಸಿದ ಸಂದೇಶವಿದೆ.

ಕಳೆದ ವಾರ ಮಂಗಳೂರು ನಗರದ ನಂತೂರು ಬಳಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಬಳಿಕ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದೆ.


ಮೂಡಬಿದ್ರೆಯಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿದ್ದ ಹಿಂದೂ ಯುವತಿ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮೂವರು ಭಜರಂಗದಳ ಕಾರ್ಯಕರ್ತರ ಬಂಧನವಾಗಿತ್ತು.

ಇದೀಗ ನಂತೂರು ನೈತಿಕ ಪೊಲೀಸ್ ಗಿರಿ ಒಪ್ಪಿಕೊಂಡಿರುವ ಬಜರಂಗದಳ ಲವ್ ಜಿಹಾದ್ ವಿರುದ್ದ ನೇರಾ ಕಾರ್ಯಾಚರಣೆ ನಡೆಸುವ ಎಚ್ಚರಿಕೆ ನೀಡಿದ್ದು ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಪೋಸ್ಟ್ ಇದೀಗ ವೈರಲ್ ಆಗಿರುವ ಜೊತೆ ತೀವ್ರ ಸಂಚಲನ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here

Hot Topics

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...