Tuesday, January 31, 2023

ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡ..! ಪುನೀತ್ ಅತ್ತಾವರ ಪೋಸ್ಟರ್ ವೈರಲ್..

ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ.

ಮಂಗಳೂರು : ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ.

ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್ ಬುಕ್ ಮತ್ತು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು ಭಾರಿ ವಿವಾದ ಸೃಷ್ಟಿಸಿದೆ.

‘ಪದೇ ಪದೇ ಹೇಳಿತ್ತಿದ್ದೇವೆ, ಹಿಂದೂ ಹುಡುಗಿಯರ ಜೊತೆ ತಿರುಗಬೇಡಿ’ ‘ಲವ್ ಜಿಹಾದ್ ಮಾಡಿ ಹಿಂದೂ ಹುಡುಗಿಯರ ಬಾಳು ಹಾಳು ಮಾಡಬೇಡಿ’ ‘ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ’ ‘ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ನಿಮಗೆ ಮಯ್ಯತ್(ಮರಣ) ಶತಸಿದ್ದ’ ಹೀಗೆ ವೈರಲ್ ಆದ ಪೋಸ್ಟರ್ ನಲ್ಲಿ ಮರಣದ ಹೇಳಿಕೆ ದಾಖಲಿಸಿದ ಸಂದೇಶವಿದೆ.

ಕಳೆದ ವಾರ ಮಂಗಳೂರು ನಗರದ ನಂತೂರು ಬಳಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಬಳಿಕ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದೆ.

ಮೂಡಬಿದ್ರೆಯಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ ಖಾಸಾಗಿ ಬಸ್‌ನಲ್ಲಿದ್ದ ಹಿಂದೂ ಯುವತಿ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಮೂವರು ಭಜರಂಗದಳ ಕಾರ್ಯಕರ್ತರ ಬಂಧನವಾಗಿತ್ತು. ಇದೀಗ ನಂತೂರು ನೈತಿಕ ಪೊಲೀಸ್ ಗಿರಿ ಒಪ್ಪಿಕೊಂಡಿರುವ ಬಜರಂಗದಳ ಲವ್ ಜಿಹಾದ್ ವಿರುದ್ದ ನೇರಾ ಕಾರ್ಯಾಚರಣೆ ನಡೆಸುವ ಎಚ್ಚರಿಕೆ ನೀಡಿದ್ದು ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಪೋಸ್ಟ್ ಇದೀಗ ವೈರಲ್ ಆಗಿರುವ ಜೊತೆ ತೀವ್ರ ಸಂಚಲನ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here

Hot Topics

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...