Connect with us

LATEST NEWS

ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

Published

on

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್‌ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಇಲ್ಲ. ಯಾವುದೇ ಶಾಸ್ಕೋಕ್ತವಾದ ಆಚರಣೆ ಇಲ್ಲದೇ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.  ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಅಗಾಸ್ಟಿನ್ ಜಾರ್ಜ್‌ ಅವರನ್ನೊಳಗೊಂಡ ಪೀಠ ಈ ರೀತಿಯಾಗಿ ಹೇಳಿದೆ.

ಮದುವೆಗೆ ಮಾನ್ಯತೆ ನೀಡಲು ಶಾಸ್ತ್ರೋಕ್ತ ಕಾರ್ಯಕ್ರಮಗಳು ನಡೆದಿರಬೇಕು. ಸಮಸ್ಯೆ ಅಥವಾ ವಿವಾದ ಉಂಟಾದಾಗ ಪರಿಹರಿಸಲು ಸಮಾರಂಭದ ಪುರಾವೆಗಳು ನೆರವಿಗೆ ಬರಲಿವೆ. ಅಂತಹ ಆಚರಣೆ ಇಲ್ಲದೆ ನಡೆದ ಮದುವೆಗೆ ಕಾಯಿದೆಯ ಸೆಕ್ಷನ್ 7ರ ಪ್ರಕಾರ ಮಾನ್ಯತೆ ಸಿಗುವುದಿಲ್ಲ. ಕೇವಲ ಇಲಾಖೆಯ ಪ್ರಮಾಣ ಪತ್ರದಿಂದ ವೈವಾಹಿಕ ಸ್ಥಿತಿ ದೃಢೀಕರಿಸಲಾಗದು. ಹಿಂದೂ ವಿವಾಹದ ವಿಧಿ ವಿಧಾನಗಳಂತೆ ಮದುವೆ ನಡೆಯದಿದ್ದರೆ ಅದನ್ನು ಹಿಂದೂ ವಿವಾಹವೆಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ವಿವರಿಸಿದೆ.

ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಮದುವೆ ಎನ್ನುವುದು ಬಹಳ ಪವಿತ್ರ. ಇದು ಇಬ್ಬರು ವ್ಯಕ್ತಿಗಳ ನಡುವಿನ ಜೀವನ ಪರ್ಯಂತ, ಘನತೆಯ ಸಮಾನ ಸಹಮತದ ಮತ್ತು ಆರೋಗ್ಯಕರ ಸಮ್ಮಿಲನ ಎಂದು ಕೋರ್ಟ್‌ ಹೇಳಿದೆ.

ನೋಂದಣಿ ಅಂತಿಮವಲ್ಲ

ಯಾವುದೇ ಶಾಸ್ತ್ರೋಕ್ತ ಆಚರಣೆ ಇಲ್ಲದೇ ಕೇವಲ ಸಂಸ್ಥೆಯೊಂದು ನೋಂದಣಿಯ ದಾಖಲೆ ಪತ್ರ ವಿತರಿಸಿದರೆ ಅದು  ಹಿಂದೂ ವಿವಾಹ ಕಾಯ್ದೆ ಅನ್ವಯ ವಿವಾಹವನ್ನು ಮಾನ್ಯಗೊಳಿಸುವುದಿಲ್ಲ. ಹಿಂದೂ ವಿವಾಹ ವಿಧಿ ವಿಧಾನದಂತೆ ಮದುವೆ ನಡೆಯದೆ ಇರುವಾಗ ಸೆಕ್ಷನ್ 8ರ ಅಡಿಯಲ್ಲಿ ನೋಂದಣಿ ಅಧಿಕಾರಿ ವಿವಾಹವನ್ನು ನೋಂದಾಯಿಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 7ರ ಪ್ರಕಾರ ವೈವಾಹಿಕ ಸಮಾರಂಭದಲ್ಲಿ ಭಾಗಿಯಾಗಿದ್ದಲ್ಲಿ ಮಾತ್ರವೇ ದೃಢೀಕರಿಸಬೇಕು ಎಂದು ಪೀಠ ಸ್ಪಷ್ಟಪಡಿಸಿದೆ. ಹಿಂದೂ ವಿವಾಹ ಕಾಯಿದೆಯ ಅಡಿಯಲ್ಲಿ ಅಗತ್ಯವಾದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸದ ವಿವಾಹಗಳನ್ನು ನೋಂದಣಿ ಮಾಡುತ್ತಿರುವ ಪ್ರವೃತ್ತಿ ಬಗ್ಗೆ ಇಬ್ಬರೂ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಏನಿದು ಪ್ರಕರಣ?

ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ಮದುವೆ ನೋಂದಣಿ ಮಾಡಿಸಿದ್ದರೂ ಹಿಂದೂ ವಿವಾಹ ಕಾಯ್ದೆಯ ಅನುಸಾರ ಸಪ್ತಪದಿ ನೆರವೇರಿರಲಿಲ್ಲ ಎಂಬುದು ನ್ಯಾಯಾಲಯಕ್ಕೆ ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ನೋಂದಣಿಯನ್ನು ಅಮಾನ್ಯ ಮಾಡಿ ಮದುವೆಯನ್ನು ರದ್ದುಗೊಳಿಸಿ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣವನ್ನೂ ಕೂಡಾ ನ್ಯಾಯಾಲಯ ರದ್ದುಗೊಳಿಸಿದೆ.

ಭಾರತೀಯ ಸಮಾಜದಲ್ಲಿ  ಮದುವೆಗೆ ಹೆಚ್ಚಿನ ಮೌಲ್ಯ ಇದೆ. ದಂಪತಿಯ ಪೋಷಕರು ಕಾಗದದ ನೋಂದಣಿಗಳನ್ನು ಪ್ರೋತ್ಸಾಹಿಸಬಾರದು. ವಿವಾಹದ ಬಗ್ಗೆ ಯುವಜನತೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಿಂದೂ ವಿವಾಹದ ಶಾಸ್ತ್ರೋಕ್ತ ಆಚರಣೆಗಳನ್ನು ಕ್ಷುಲ್ಲಕವೆಂದು ಪರಿಗಣಿಸುವ ಬದಲು “ಶ್ರದ್ಧೆಯಿಂದ ಕಟ್ಟುನಿಟ್ಟಾಗಿ ಮತ್ತು ಧಾರ್ಮಿಕವಾಗಿ ಪಾಲಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

DAKSHINA KANNADA

ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ

Published

on

ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.

ಸ್ಫಟಿಕ ಲೋಹ

ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.

ಬಿದಿರಿನ ಗಿಡ

ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.

ಬುದ್ಧನ ಪ್ರತಿಮೆ

ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.

ಹಡಗು ಚಿತ್ರವಿರುವ ನಾಣ್ಯ

ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.

ಗಣೇಶ ಮೂರ್ತಿ

ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.

Continue Reading

LATEST NEWS

Trending