Sunday, June 4, 2023

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು: ಯಡಿಯೂರಪ್ಪ ಸಲಹೆ

ಮಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.


ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯಾದರೂ ಇಂತಹ ಅಹಿತಕರ ಘಟನೆ ನಡೆಯದೇ ಎಲ್ಲರೂ ಒಟ್ಟಾಗಿ ಬಾಳಲು ಅವಕಾಶ ಮಾಡಿಕೊಡಬೇಕು. ಕಿಡಿಗೇಡಿ ಕೆಲಸವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ಇಂತಹ ಘಟನೆಗಳನ್ನು ನಿಲ್ಲಿಸಿ ಎಲ್ಲರೂ ಅವರವರ ಕೆಲಸ ಮಾಡಿಕೊಂಡಿರಬೇಕು. ಪ್ರತಿಯೊಬ್ಬರು ಗೌರವದಿಂದ ಬದುಕಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಬಲವರ್ಧನೆ
ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗಾಗಿ ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಮೊದಲನೇ ತಂಡದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,

ಎರಡನೇ ತಂಡದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ನಾನು ಜೊತೆಗಿರುತ್ತೇನೆ, ಮೂರನೇ ತಂಡದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here

Hot Topics