Wednesday, December 1, 2021

ಅಕ್ರಮವಾಗಿ ಗೋಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಹಿಂಜಾವೆ ದಾಳಿ: ಆರೋಪಿಗಳ ಬಂಧನ

ಮಡಿಕೇರಿ: ಗೋವು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ದಾಳಿ ನಡೆಸಿ ಗೋಮಾಂಸ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳಗಿನ ಜಾವ 4 ಗಂಟೆಗೆ ಸುಮಾರಿಗೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ತಂಡ ಕೊಣನೂರು ಪೋಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗಳಲೆ ಎಂಬ ಸ್ಥಳದ ಕಟ್ಟಡವೊಂದರಲ್ಲಿ ಸ್ಥಳೀಯ ವ್ಯಕ್ತಿ ಕುಮಾರ್ ಮತ್ತು ಆತನ ಸಹಚರರು ಅಕ್ರಮವಾಗಿ ಗೋವನ್ನು ಹತ್ಯೆಗೈದು ಮಾಂಸ ಮಾಡುತ್ತಿದ್ದ ಸಂದರ್ಭ ಧಾಳಿ ನಡೆಸಿ ಗೋಮಾಂಸ ಸಮೇತ ಆರೋಪಿಗಳನ್ನು ಸ್ಥಳೀಯ ಪೊಲೀಸರಿಗೊಪ್ಪಿಸಿದ್ದಾರೆ.


ಪ್ರಮುಖ ಆರೋಪಿ ಕುಮಾರ್ ನ ಪತ್ನಿ ಪ್ರಸ್ತುತ ಗ್ರಾಮ ಪಂಚಾಯಿತಿಯ ಸದಸ್ಯೆಯಾಗಿದ್ದು ಪತಿಯ ಅಕ್ರಮ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದುದು ಬಹಿರಂಗಗೊಂಡಿದೆ. ಸ್ಥಳೀಯವಾಗಿ ಕೊಟ್ಟಿಗೆಯಲ್ಲಿ ಗೋಸಾಕಾಣಿಕೆಯ ನೆಪದಲ್ಲಿ ಮಾಂಸ ಮಾಡುವ ದುರುದ್ದೇಶದೊಂದಿಗೆ ಕೂಡಿಹಾಕಿದ್ದ 10 ಕ್ಕೂ ಹೆಚ್ಚು ಗೋವುಗಳನ್ನು ಈ ಸಂದರ್ಭ ರಕ್ಷಿಸಲಾಗಿದೆ. ಅದೇ ಕಟ್ಟಡದಲ್ಲಿ ಕಳ್ಳಬಟ್ಟಿ ಮತ್ತು ಕಳ್ಳಬಟ್ಟಿ ತಯಾರಿಸಲು ಶೇಖರಿಸಿಟ್ಟಿದ್ದ ಪುಳಗಂಜಿಯೂ ಪತ್ತೆಯಾಗಿದ್ದು ಅವುಗಳನ್ನೂ ಪೋಲೀಸರ ವಶಕ್ಕೆ ನೀಡಲಾಗಿದ್ದು ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...