Tuesday, January 31, 2023

ದೇಗುಲಗಳಲ್ಲಿ ಪೂಜಾಕೈಂಕರ್ಯ ಸುಲಲಿತವಾಗಿ ನಡೆಯಲು ಮುಜರಾಯಿ ಇಲಾಖೆಗೆ ಅರ್ಚಕರಿಂದ ಮನವಿ

ಬೆಂಗಳೂರು: ದೇಗುಲಗಳಲ್ಲಿ ಪೂಜಾಕೈಂಕರ್ಯಗಳು ಸುಲಲಿತವಾಗಿ ನಡೆಯಲು ಏರ್ಪಡಿಸುವಂತೆ ಮುಜರಾಯಿ ದೇವಸ್ಥಾನದ ಅರ್ಚಕರು ಹಾಗೂ ಅರ್ಚಕರ ಒಕ್ಕೂಟದಿಂದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಲಾಯಿತು.

ಇಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿಯಾದ ಅರ್ಚಕರ ಒಕ್ಕೂಟ, ಮುಜುರಾಯಿ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಮನವಿ ಪತ್ರ ನೀಡಿದರು.

ಇದೇ ವೇಳೆ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಎಲ್ಲ ಕೋವಿಡ್ ನಿಯಮ ಪಾಲನೆ ಅನುಸಾರ ಎಲ್ಲ ಸೇವೆಗಳು ಹಾಗೂ ಪೂಜಾ ಕೈಂಕರ್ಯಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...