DAKSHINA KANNADA
ಸುಳ್ಯ: ಹಿಂದೂ ಯುವತಿಯರ ಜತೆ ಅನ್ಯಕೋಮಿನ ಪ್ರಯಾಣ: ತಪ್ಪು ಮಾಹಿತಿ ತಿಳಿದು ಅಡ್ಡಗಟ್ಟಿ ರಾದ್ದಾಂತ ಮಾಡಿದ ಹಿಂದೂ ಸಂಘಟನೆ ಕಾರ್ಯಕರ್ತರು
ಮಂಗಳೂರು: ಅನ್ಯಕೋಮಿನ ಯುವಕನ ಜೊತೆಗೆ ಹಿಂದೂ ಯುವತಿಯರು ಬಸ್ನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ ಎಂಬ ತಪ್ಪು ಮಾಹಿತಿ ತಿಳಿದು ಬಸ್ ಅನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ ಘಟನೆ ಸುಳ್ಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ಗುರುವಾರ ರಾತ್ರಿ ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಗೆ ಇಬ್ಬರು ಯುವತಿಯರು ಹತ್ತಿದ್ದರು. ಅದೇ ಬಸ್ಸಲ್ಲಿ ಕುಂಬ್ರದವರೆಗೆ ಬರಲು ಬೆಳ್ಳಾರೆ ಸಮೀಪದ ಅನ್ಯಕೋಮಿನ ಯುವಕ ಹತ್ತಿದ್ದ.
ಬಸ್ನ ಎದುರುಗಡೆಯ ಒಂದು ಬದಿಯ ಸೀಟಲ್ಲಿ ಆ ಯುವತಿಯರು ಕುಳಿತಿದ್ದರೆ, ಇನ್ನೊಂದು ಬದಿಯ ಸೀಟಲ್ಲಿ ಅನ್ಯಕೋಮಿನ ಯುವಕ ಕುಳಿತಿದ್ದ.
ಬಸ್ ಕುಂಬ್ರ ತಲುಪಿದಾಗ ಆ ಯುವಕ ಅಲ್ಲಿ ಇಳಿಯದೆ ಬೆಂಗಳೂರಿಗೆ ಮತ್ತೆ ಟಿಕೆಟ್ ಮಾಡಿದ್ದ. ಬಸ್ಸಲ್ಲಿದ್ದ ಯಾರೋ ಕಿಡಿಗೇಡಿ ಇದನ್ನು ಗಮನಿಸಿ, ಪುತ್ತೂರಿನ ಬಜರಂಗ ದಳದ ಯುವಕರಿಗೆ ಮಾಹಿತಿ ನೀಡಿದ್ದಾನೆ.
ಈ ಹಿನ್ನೆಲೆಯಲ್ಲಿ ಪುತ್ತೂರಿನ ಐದಾರು ಯುವಕರು ತಮ್ಮ ಕಾರಲ್ಲಿ ಬಸ್ಸನ್ನು ಬೆನ್ನತ್ತಿ ಬಂದು ಆನೆಗುಂಡಿಯಲ್ಲಿ ಅಡ್ಡಗಟ್ಟಿದರು.
ಯುವಕರು ಬಸ್ಸೇರಿ ಎದುರು ಸೀಟಿನಲ್ಲಿ ಕುಳಿತಿದ್ದ ಯುವಕನನ್ನು ವಿಚಾರಿಸಿದರಲ್ಲದೆ ಆತನ ಮೊಬೈಲ್ ಕಿತ್ತುಕೊಂಡು, ಯುವತಿಯರ ಜತೆ ಆತ ಮಾತನಾಡುತ್ತಿದ್ದ ಬಗ್ಗೆ ಪ್ರಶ್ನಿಸಿದರು.
ಆ ಯುವತಿಯರು ಮತ್ತು ಬಸ್ ನಿರ್ವಾಹಕ ಇದನ್ನು ನಿರಾಕರಿಸಿದರು.
ಆ ಸಂದರ್ಭ ಅದೇ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸರೊಬ್ಬರು, ಬಸ್ಸಲ್ಲಿ ಈ ರೀತಿ ಜಗಳ ಮಾಡಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ.
ಏನಿದ್ದರೂ ಸುಳ್ಯ ಪೊಲೀಸ್ ಠಾಣೆಗೆ ಹೋಗಿ ಅಲ್ಲಿ ಇತ್ಯರ್ಥ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದನ್ನು ಒಪ್ಪಿಕೊಂಡ ಸಂಘಟನೆಯ ಯುವಕರು ಬಸ್ಸನ್ನು ಪೊಲೀಸ್ ಠಾಣೆಗೆ ಕೊಂಡೊಯ್ಯ ಬೇಕೆಂದು ಚಾಲಕ ಮತ್ತು ನಿರ್ವಾಹಕರಿಗೆ ತಾಕೀತು ಮಾಡಿ, ತಮ್ಮ ಕಾರಲ್ಲಿ ಬಸ್ಸನ್ನು ಹಿಂಬಾಲಿಸತೊಡಗಿದರು.
ಪೈಚಾರ್ನಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸುವುದಕ್ಕಾಗಿ ಬಸ್ ನಿಂತಾಗ ಯುವಕ ಕೂಡ ಬಸ್ನಿಂದ ಇಳಿದು ತನ್ನ ಸೇಹಿತರಿಗೆ ವಿಷಯ ತಿಳಿಸಿ, ತನ್ನ ಮೊಬೈಲನ್ನು ವಿನಾಕಾರಣ ಹಿಂದೂ ಸಂಘಟನೆಯ ಯುವಕರು ಇಟ್ಟುಕೊಂಡಿರುವುದಾಗಿ ತಿಳಿಸಿದ್ದಾನೆ.
ಪೈಚಾರ್ನಲ್ಲಿ ಜನ ಜಮಾಯಿಸಿದರು. ಬಸ್ಸನ್ನು ಹಿಂದೂ ಸಂಘಟನೆಯ ಯುವಕರು ಹಿಂಬಾಲಿಸುತ್ತಿರುವ ಮಾಹಿತಿ ಮೊದಲೇ ಬಂದ ಹಿನ್ನೆಲೆಯಲ್ಲಿ ಸುಳ್ಯ ಎಸ್ಐ ಹರೀಶ್ ಎಂ.ಆರ್. ಅವರು ಪೈಚಾರ್ಗೆ ಧಾವಿಸಿದರು.
ಆ ವೇಳೆಗೆ ಬಸ್ ನಿಂತು ಜನ ಸೇರಿದ್ದರು. ಬಸ್ಸನ್ನು ಠಾಣೆಗೆ ತರುವಂತೆ ಸೂಚಿಸಿದ ಎಸ್ಐ, ಬಜರಂಗ ದಳದ ಐವರು ಯುವಕರನ್ನು ಕರೆದುಕೊಂಡು ಠಾಣೆಗೆ ಬಂದರು.
ಠಾಣೆಯಲ್ಲಿ ಆ ಇಬ್ಬರು ಯುವತಿಯರು ಮತ್ತು ಯುವಕನನ್ನು ವಿಚಾರಣೆಗೆ ಒಳಪಡಿಸಲಾಯಿತು.
ಯುವಕನ ಮತ್ತು ಆ ಯುವತಿಯರ ಮೊಬೈಲ್ ಪರಿಶೀಲಿಸಿದಾಗ ಅವರ ನಂಬರ್ಗಳು ಎರಡೂ ಮೊಬೈಲ್ಗಳಲ್ಲಿ ಇರಲಿಲ್ಲ. ಎರಡೂ ಕಡೆಯವರು ತಮಗೆ ಪರಿಚಯವೇ ಇಲ್ಲದ ಬಗ್ಗೆ ಹೇಳಿಕೊಂಡರಲ್ಲದೆ ಬಸ್ಸಲ್ಲಿ ಕೂಡ ಪರಸ್ಪರ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು.
ಇದನ್ನು ಬಸ್ ಕಂಡಕ್ಟರ್ ಕೂಡ ಖಚಿತಪಡಿಸಿದರು. ಈ ಪ್ರಕರಣವನ್ನು ಅಲ್ಲಿಗೆ ಇತ್ಯರ್ಥಗೊಳಿಸಲಾಯಿತು.
DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?
ಅಶ್ವಿನಿ ದೇವತೆಗಳು ಯಾರು.?
ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.
ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?
ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.
ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.
ಅಶ್ವಿನಿ ದೇವತೆಗಳ ಮಹತ್ವ:
ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.
ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.
DAKSHINA KANNADA
ವೋಟ್ ಮಾಡಿ, ಊಟ ಮಾಡಿ: ಹೋಟೆಲ್ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!
ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.
ವೋಟ್ ಮಾಡಿ, ಊಟ ಮಾಡಿ:
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.
ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.
SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.
ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.