ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು.
ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆಕ್ಷೇಪ ಮಾತ್ರವಲ್ಲ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದಿದ್ದಾರೆ.
ಮೂರು ವರ್ಷಗಳ ಹಿಂದೆಯೂ ಇಲ್ಲಿ ಸ್ಕಾರ್ಫ್ ವಿವಾದವಾಗಿತ್ತು ಎನ್ನಲಾಗಿದೆ.
ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ಮಾತುಕತೆ ನಡೆಸಿ ತಿಳಿಗೊಳಿಸಿದ್ದರು.
ಆದರೆ ಇದೀಗ ಉಡುಪಿ ಕಾಲೇಜು ಸ್ಕಾರ್ಫ್ ವಿವಾದ ಮುನ್ನಲೆಗೆ ಬಂದಿದೆ. ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು ಎನ್ನಲಾಗಿದೆ.