Connect with us

DAKSHINA KANNADA

ಮಂಗಳೂರು ಮಳಲಿ ದರ್ಗಾವಿದ್ದ ಜಾಗದಲ್ಲೇ ಹಿಂದೂ ದೇವಾಲಯ ಪತ್ತೆ..! ಸ್ಥಳಕ್ಕೆ ಪೊಲೀಸ್ ಭದ್ರತೆ..

Published

on

ಮಂಗಳೂರು : ಮಂಗಳೂರು ಹೊರವಲಯದ ಗುರುಪುರ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಇತಿಹಾಸ ಪ್ರಸಿದ್ಧ ದರ್ಗಾ‌ ಮತ್ತು ಮಸೀದಿಯ ಪಕ್ಕ ನಿಗೂಢವಾಗಿ ಉಳಿದಿದ್ದ ದೇವಸ್ಥಾನದ ಗುಡಿ ಪತ್ತೆಯಾಗಿದೆ.

ಇತ್ತೀಚೆಗೆ ಮಳಲಿ ದರ್ಗಾದ ನವೀಕರಣದ ಸಲಯವಾಗಿ ಅದನ್ನು ತೆಗೆಯಲಾಗಿದ್ದು, ಈ ವೇಳೆ ಈ ಗುಡಿ ಪತ್ತೆಯಾಗಿದೆ. ಇದುವರೆಗೂ ಹಿಂದೂಗಳಿಗೆ ಇದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.

ಆದರೆ ಹಳೆಯ ದರ್ಗಾ ಕೆಡವಿದಾಗ ಅದರ ಹಿಂದೆ ಅನೇಕ ವರ್ಷಗಳಿಂದ ನಿಗೂಢವಾಗಿ ಉಳಿದಿದ್ದ ಗುಡಿ ಪತ್ತೆಯಾಗಿದೆ. ಕಲಷ, ತೋಮರ, ಕಂಬಗಳು ಇರುವ ದೇಗುಲ ಇದಾಗಿದ್ದು, ಇದರೊಳಗಡೆ ಯಾವ ದೇವರ ಮೂರ್ತಿ ಇದೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

ಆದರೆ‌ ಮಸೀದಿಯವರು ದೇವಸ್ಥಾನಕ್ಕೆ ಹಾನಿ ಮಾಡದೆ ಸೌಹಾರ್ದತೆ ಮರೆದಿದ್ದಾರೆ.ಮಳಲಿ ಅಬ್ಬಕ್ಕನ ಊರಾಗಿದ್ದು, ಇಲ್ಲಿ ಅನೇಕ ಜೈನ ಹಾಗೂ ಹಿಂದೂಗಳ ದೇವರ ಕುರುಹುಗಳು ಪತ್ತೆಯಾಗಿದೆ‌.

ಇದಕ್ಕೆ ಮಳಲಿ ದೇವರಗುಡ್ಡೆಯೂ ಒಂದು. ಅದೇ ರೀತಿ ಮಳಲಿಯ ಕುರ್ವೆಮಾರ್ ಫಲ್ಗುಣಿ ಸಮೀಪವೂ ಶಿವಲಿಂಗ ಹಾಗೂ ಪಾಣಿಪೀಠ ಪತ್ತೆಯಾಗಿದೆ. ಆದರೆ ಇದರ ದೇವಸ್ಥಾನ ಎಲ್ಲಿತ್ತು ಎಂದು ತಿಳಿದುಬಂದಿಲ್ಲ.

ಪೊಳಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ದೇವಸ್ಥಾನ ಇದಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅದರ ಪಕ್ಕ ಮಸೀದಿ ಹೇಗೆ ನಿರ್ಮಾಣವಾಯಿತು,

ಇಲ್ಲಿಗೆ ಟಿಪ್ಪೂ ಸುಲ್ತಾನ್ ಬಂದಿದ್ದನೇ ಎಂದು ಐತಿಹಾಸಿಕ ಅಧ್ಯಯನಗಳ ಮೂಲಕ ತಿಳಿದುಬರಬೇಕಿದೆ. ಕೆಲವೊಂದು ಮೂಲಗಳ ಪ್ರಕಾರ ಮಳಲಿಯಲ್ಲಿ ಟಿಪ್ಪುವಿನ ಟಂಕಸಾಲೆಯೂ ಇದ್ದಿರಬಹುದೆಂದು ಇತಿಹಾಸ ತಜ್ಞರು ಶಂಕಿಸಿದ್ದಾರೆ.

ಸದ್ಯ ಸದರಿ ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದು, ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿದ್ದು, ಜಿಲ್ಲಾಡಳಿತದ ಸೂಚನೆಗೆ ಸಮ್ಮತಿ ಸೂಚಿಸಿದೆ. ಈ ಬಗ್ಗೆ ಮಾತನಾಡಿದ ಶರಣ್ ಪಂಪ್ವೆಲ್ ಈ ಜಾಗದಲ್ಲಿ ಹಿಂದೂ ದೇವಸ್ಥಾನದ ಕುರುಹು ಸ್ಪಷ್ಟವಾಗಿ ಕಾಣುತ್ತಿದೆ.

ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು, ಅಲ್ಲಿಯವರೆಗೆ ಈ ಜಾಗದಲ್ಲಿ ಮಸೀದಿ ನವೀಕರಣ ಮಾಡಲು ಅನುಮತಿ ನೀಡಬಾರದು.

ತಾತ್ಕಾಲಿಕ ತಡೆ ನೀಡಬೇಕು ಎಂದಿದ್ದಾರೆ. ಪ್ರಸ್ತುತ ಸ್ಥಳಕ್ಕೆ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು ಪ್ರಕರಣ ಇತ್ಯಾರ್ಥವಾಗುವ ವರೆಗೆ ಪೊಲೀಸ್ ಭದ್ರತೆಯನ್ನಯ ಹಾಕಲಾಗಿದೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending