ಐತಿಹಾಸಿಕ ನಾಡ ಹಬ್ಬ ದಸರಾಕ್ಕೆ ಚಾಲನೆ : ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್‌ವೈ..!
ಮೈಸೂರು: ಐತಿಹಾಸಿಕ ಮೈಸೂರು ದಸರಾಕ್ಕೆ ಇಂದು ಚಾಲನೆ ದೊರೆತಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ.
ಮಹಾಮಾರಿ ನಾಡಿನೆಲ್ಲೆಡೆ ಭಾಧಿಸಿದ ಕಾರಣ ಈ ಬಾರಿ ನಾಡ ಹಬ್ಬ ದಸರವನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಇದೇ ಸಂದರ್ಭ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಮಾಡಲಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ದಸರಾ ಉದ್ಘಾಟಕರಾದ ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್ ಮಂಜುನಾಥ್‌ರವರ ಸಮ್ಮುಖದಲ್ಲಿ ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.
ಇಡೀ ವಿಶ್ವವೇ ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ಕೊರೊನಾ ವಾರಿಯರ್ಸ್ ಅಸಂಖ್ಯಾತ ಜನರ ಪ್ರಾಣ ರಕ್ಷಣೆಗೆ ಹೋರಾಡುತ್ತಿದ್ದಾರೆ.
ಈ ನಿಟ್ಟಿನಲ್ಲಿ ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್‌ಗಳನ್ನು ಸ್ಮರಿಸಲಾಗಿದೆ. ಸಂಕೇತಿಕವಾಗಿ ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್‌ಸ್ಟೆಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್‌ಗೆ ಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು.