Connect with us

DAKSHINA KANNADA

ಇತಿಹಾಸದ ಪುಟಕ್ಕೆ ಸೇರಿದ ಮಂಗಳೂರು ಸೆಂಟ್ರಲ್‌ ಮಾರುಕಟ್ಟೆ..! ಮಾರುಕಟ್ಟೆ ನೆಲಸಮ ಕಾರ್ಯ ಆರಂಭ

Published

on

ಮಂಗಳೂರು : ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್‌ ಇತಿಹಾಸದ ಪುಟಕ್ಕೆ ಸೇರಿದೆ. ಅರ್ಧ ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಹಳೇಯ ಮತ್ತು ಬೃಹತ್ ಮಾರುಕಟ್ಟೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಾಲಿಕೆ ಅಧಿಕಾರಿಗಳ ಸಮಾಕ್ಷಮದಲ್ಲಿ ಕೆಡವಿ ಹಾಕುವ ಕಾರ್ಯ ಆರಂಭವಾಗಿದೆ.

ಕಳೆದ ವರ್ಷ ಕೊರೋನ ಸೋಂಕಿನ ಸಂದರ್ಭ ವ್ಯಾಪಾರ-ವಹಿವಾಟು ಸ್ಥಗಿತಗೊಂಡ ಬಳಿಕ ಭಾಗಶಃ ಮುಚ್ಚಲ್ಪಟ್ಟಿದ್ದ ಸೆಂಟ್ರಲ್ ಮಾರ್ಕೆಟ್‌ನ ಈ ಹಳೆಯ ಕಟ್ಟಡವನ್ನು ಕೆಡವಲಾಗುತ್ತಿದ್ದು ಸ್ಮಾರ್ಟ್ ಸಿಟಿ ಯೋಜನೆ ಅಡಿ ಈ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿದು ಬಂದಿದೆ.

ಏಕಾಎಕಿ ಕಟ್ಟಡವನ್ನು ನೆಲಸಮಗೊಳಿಸಲು ಆರಂಭ ಮಾಡಿದಕ್ಕೆ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ತಮ್ಮ ಅಮೂಲ್ಯ ಸೊತ್ತುಗಳು ಮಾರುಕಟ್ಟೆ ಒಳಗೆ ಇದ್ದು ಅದನ್ನು ತೆರವು ಗೊಳಿಸಲು ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದ್ದರು.

ಆದರೆ ಇದಾವುದಕ್ಕೂ ಸೊಪ್ಪು ಹಾಕದ ಅಧಿಕಾರಿಗಳು ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ಇನ್ನು ಮಾರುಕಟ್ಟೆ ಕೆಡವುತ್ತಿರುವ ವಿಚಾರ ಅರಿತ ಮಾಜಿ ಶಾಸಕ ಜೆ ಆರ್ ಲೋಬೋ ಹಾಗೂ ಇತರ ಕಾಂಗ್ರೆಸ್ ನಾಯಕರು ಆಗಮಿಸಿ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು.

ಜೆ ಆರ್ ಲೋಬೋ ಮಾತನಾಡಿ ಇಲ್ಲಿ 500ಕ್ಕೂ ಅಧಿಕ ವರ್ತಕರು ಕೆಲಸ ಮಾಡುತ್ತಿದ್ದರು. ಆದರೆ ಹಠಾತ್ತನೆ ವ್ಯಾಪಾರಿಗಳನ್ನು ಇಲ್ಲಿಂದ ತೆರವು ಮಾಡಿ ಬೈಕಂಪಾಡಿ ಎಪಿಎಂಸಿ ಯಾರ್ಡಿಗೆ ಕಳುಹಿಸಿದ್ದಾರೆ.

ಬಳಿಕ ಅವರಿಗೆ ಯಾವುದೇ ಮುನ್ಸೂಚನೆ ನೀಡದೇ ಹಠಾತ್ತಾಗಿ ತೆರವು ಮಾಡಿದ್ದಾರೆ. ಈ ಕೋವಿಡ್ ಸಂದರ್ಭದಲ್ಲಿ ಪಾಲಿಕೆ ಜನರಿಗೆ, ವ್ಯಾಪಾರಿಗಳಿಗೆ ಅನ್ಯಾಯ ಮಾಡುತ್ತಿದೆ.

ಮಂಗಳೂರಿನ ಬೆಳವಣಿಗೆಯಲ್ಲಿ ಇಲ್ಲಿನ ವ್ಯಾಪಾರಿಗಳು ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರನ್ನು ಪಾಲಿಕೆ ವೈರಿಗಳನ್ನಾಗಿ ಕಂಡಿರುವುದು ಸರಿಯಲ್ಲ.

ಯಾವುದೇ ನೊಟೀಸ್ ನೀಡದೇ ಅವರ ಸಾಮಾನು ಸರಂಜಾಮುಗಳನ್ನು ತೆರವು ಮಾಡಲು ಸೂಚಿಸಿ ಬಳಿಕ ತೆರವು ಮಾಡಲು ಹೇಳಬೇಕಾಗಿತ್ತು ಎಂದರು. ಪಾಲಿಕೆ ಪ್ರತಿಪಕ್ಷ ನಾಯಕರಾದ ಎ ಸಿ ವಿನಯರಾಜ್‌, ಸದಸ್ಯ ಪ್ರವೀಣ್‌ಚಂದ್ರ ಆಳ್ವಾ ಮೊದಲಾದವರು ಪಾಲಿಕೆ ಕ್ರಮವನ್ನು ಖಂಡಿಸಿದರು.

DAKSHINA KANNADA

ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”

Published

on

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ  ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಡಿ.14ರಂದು ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Continue Reading

BELTHANGADY

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Continue Reading

BELTHANGADY

ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!

Published

on

ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾ‌ರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.

ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇ‌ರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.

Continue Reading

LATEST NEWS

Trending