Connect with us

LATEST NEWS

ಪುತ್ತೂರು ಕಂಬಳ ಸಂಪನ್ನ: ಹೊಸ ದಾಖಲೆ ಸೃಷ್ಠಿ-169 ಜೋಡಿ ಕೋಣಗಳು ಭಾಗಿ

Published

on

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ನಡೆದ ಕೋಟಿ-ಚೆನ್ನೆಯ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ.


ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು, ನಿನ್ನೆ ರಾತ್ರಿ 8 ಗಂಟೆಯ ತನಕ ನಿರಂತರವಾಗಿ ನಡೆಯಿತು.

ರಾತ್ರಿ ಸುಮಾರು 8.30 ವೇಳೆಗೆ ಸಮಾಪನಗೊಂಡಿದೆ. ಶನಿವಾರ ಬೆಳಗ್ಗೆಯಿಂದ ನಿನ್ನೆ ಸಮಾರೋಪ ಸಮಾರಂಭದ ತನಕ ಲಕ್ಷಾಂತರ ಮಂದಿ ಕಂಬಳ ವೀಕ್ಷಿಸುವ ಮೂಲಕ ಕೋಟಿ-ಚೆನ್ನೆಯ ಕಂಬಳಕ್ಕೆ ಸಾಕ್ಷಿಯಾದರು.

ಸಮಾರೋಪದಲ್ಲಿ ಕೋಣಗಳ ವಿಜೇತರಿಗೆ ಚಿನ್ನದ ಪದಕ, ನಗದು ಜತೆಗೆ ಈ ಬಾರಿ ವಿಶೇಷವಾಗಿ ಕೋಟಿ-ಚೆನ್ನಯ ಟ್ರೋಫಿಯನ್ನು ವಿತರಿಸಲಾಯಿತು.

ಕಂಬಳ ಸಮಿತಿಯ ಕೋಶಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ,ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್,ಪಿವಿ ಉಪಾಧ್ಯಕ್ಷರಾದ ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ , ಪ್ರೇಮಾನಂದ ನಾಯಕ್, ವಸಂತ ರೈ ದುಗ್ಗಳ, ಪ್ರವೀಣ್ ಚಂದ್ರ ಆಳ್ವ ,ಸದಸ್ಯರಾದ ಯೋಗೀಶ್ ಸಮಾನಿ ಸಂಪಿಗೆದಡಿ, ಕೃಷ್ಣಪ್ರಸಾದ್ ಆಳ್ವ ರೋಶನ್ ರೈ ಬನ್ನೂರು ಮತ್ತಿತರರು ಪಾಲ್ಗೊಂಡಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಎನ್ .ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.ಸಮಿತಿಯ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರನ್ನು ಸನ್ಮಾನಿಸಲಾಯಿತು.

ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬ ವಿಜೇತರ ಪಟ್ಟಿ ಒದಿದರು. 29ನೇ ವರ್ಷದ ಪುತ್ತೂರು ಕೋಟಿ ಚೆನ್ನೆಯ ಜೋಡುಕರೆ ಕಂಬಳದಲ್ಲಿ ಉಡುಪಿ , ದ.ಕ ಜಿಲ್ಲೆಯ 169 ಜೋಡಿ ಕೋಣಗಳು ಪಾಲ್ಗೊಂಡಿದ್ದು ಕನೆಹಲಗೆ 4 ಜತೆ, ಅಡ್ಡಹಲಗೆ 6 ಜತೆ , ಹಗ್ಗ ಕಿರಿಯ 14 ಜತೆ, ನೇಗಿಲು ಹಿರಿಯ 30ಜತೆ, ಹಗ್ಗ ಕಿರಿಯ 21 ಜತೆ ,ನೇಗಿಲು ಕಿರಿಯ 93 ಜೊತೆ ಸೇರಿದಂತೆ ಒಟ್ಟು 169 ಜತೆ ಕೋಣಗಳು ಇದ್ದವು.

ಫಲಿತಾಂಶ ವಿವರ:

ಕನೆಹಲಗೆ: 04 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 14 ಜೊತೆ
ನೇಗಿಲು ಹಿರಿಯ: 30 ಜೊತೆ
ಹಗ್ಗ ಕಿರಿಯ: 21 ಜೊತೆ
ನೇಗಿಲು ಕಿರಿಯ: 93 ಜೊತೆ
ಒಟ್ಟು ಕೋಣಗಳ ಸಂಖ್ಯೆ: 169 ಜೊತೆ
••••••••••••••••••••••••••••••••••••••••••••••
ಕನೆಹಲಗೆ:
ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ್ ಕುಮಾರ್ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ “ಎ”
ಓಡಿಸಿದವರು:ಭಟ್ಕಳ ಶಂಕರ್ ನಾಯ್ಕ್
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ “ಬಿ”
ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಬೆಳ್ಳಾರೆ ಕುಂಟಿಪುನಿ ಗುತ್ತು ಪ್ರಮೋದ್ ಸುರೇಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

Click to comment

Leave a Reply

Your email address will not be published. Required fields are marked *

FILM

ಟಿ ಆರ್ ಪಿ ಪಟ್ಟಿಯಲ್ಲಿ ಯಾವ ಧಾರಾವಾಹಿಗೆ ಸಿಕ್ಕಿದೆ ಮೊದಲ ಸ್ಥಾನ?

Published

on

ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ.

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಧಾರಾವಾಹಿ ಪ್ರಿಯರು. ಮಧ್ಯಾಹ್ನ, ರಾತ್ರಿ ಪ್ರಸಾರವಾಗುವ ಧಾರಾವಾಹಿಗಳನ್ನು ಬಿಡದೆ ನೋಡುವ ವರ್ಗವಿದೆ. ಆಯಾ ಧಾರಾವಾಹಿಗೆ ಆಯಾ ವೀಕ್ಷಕ ವರ್ಗವಿದೆ. ಹೀಗಿರುವ ಯಾವ ಧಾರಾವಾಹಿ ಎಷ್ಟು ಟಿ ಆರ್ ಪಿ ಹೊಂದಿದೆ ಅನ್ನೋ ಡಿಟೇಲ್ಸ್ ಇಲ್ಲಿದೆ.

ಟಾಪ್ 5 ಧಾರಾವಾಹಿಗಳು :

ಪುಟ್ಟಕ್ಕನ ಮಕ್ಕಳು


ಮೂವರು ಹೆಣ್ಣುಮಕ್ಕಳ ತಾಯಿಯಾಗಿ ಕಷ್ಟ ಕಾರ್ಪಣ್ಯಗಳಿಂದ ಬೆಂದಿರುವ ಮಹಿಳೆಯ ಪ್ರಧಾನ ಕಥೆ ಒಳಗೊಂಡಿರುವ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಹಿರಿಯ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ 17ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ವೀಕ್ಷಕರ ಅಚ್ಚುಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿದೆ. ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ರಮೇಶ್‌ ಪಂಡಿತ್‌, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಪಾತ್ರವಾಗಿದೆ.

ಲಕ್ಷ್ಮೀ ನಿವಾಸ

ಇತ್ತೀಚೆಗೆ ಆರಂಭಗೊಂಡ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಟಿಆರ್‌ಪಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದ ಮೊದಲು ಮೊದಲ ಸ್ಥಾನದಲ್ಲಿದ್ದ ಲಕ್ಷ್ಮೀ ನಿವಾಸ ಧಾರಾವಾಹಿ ಈ ವಾರ ಕೆಲವೇ ಕೆಲವು ಪಾಯಿಂಟ್‌ ಅಂತರದಲ್ಲಿ ಎರಡನೇ ಸ್ಥಾನದದಲ್ಲಿದೆ. ಕೌಟುಂಬಿಕ ಕಥಾಹಂದರವುಳ್ಳ ಈ ಧಾರಾವಾಹಿ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ನವಿರಾದ ಪ್ರೇಮಕಥೆ, ಸಂಸಾರದ ತಲ್ಲಣಗಳಿವೆ.

ಸೀತಾ ರಾಮ


ನವಿರಾದ ಪ್ರೇಮಕಥೆ ಇರುವ ಸೀತಾ ರಾಮ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಜನಮನ ಗೆದ್ದಿರುವ ಈ ಧಾರಾವಾಹಿಯಲ್ಲಿ ಪುಟಾಣಿ ಸಿಹಿ ಎಲ್ಲರಿಗೂ ಅಚ್ಚುಮೆಚ್ಚು. ದಿನದಿಂದ ದಿನಕ್ಕೆ ಸೀತಾ ರಾಮ ಧಾರಾವಾಹಿ ಕುತೂಹಲ ಪೂರ್ಣವಾಗಿ ಸಾಗುತ್ತಿದೆ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಶ್ರಾವಣಿ ಸುಬ್ರಮಣ್ಯ


ಇತ್ತೀಚೆಗೆ ಆರಂಭಗೊಂಡ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರಾವಣಿ ಸುಬ್ರಮಣ್ಯ ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮಿನಿಸ್ಟರ್‌ ಮಗಳು ಶ್ರಾವಣಿಯ ತರಲೆ, ಮಿನಿಸ್ಟರ್‌ ಬಲಗೈ ಬಂಟ ಸುಬ್ರಮಣ್ಯನ ಕಥೆ ಧಾರಾವಾಹಿಯಲ್ಲಿದೆ. ಮಗಳನ್ನು ದ್ವೇಷಿಸುವ ತಂದೆ, ತಂದೆಯನ್ನು ಪ್ರೀತಿಸುವ ಮಗಳು, ಒಂದಷ್ಟು ಸಸ್ಪೆನ್ಸ್ ಧಾರಾವಾಹಿಯ ಜೀವಾಳ.

ರಾಮಾಚಾರಿ :


ವಿಭಿನ್ನ ಕತೆಯನ್ನೊಳಗೊಂಡ ರಾಮಾಚಾರಿ ಆರಂಭದಿಂದಲೂ ಜನಮನ ಗೆದ್ದಿತ್ತು. ಟಿಆರ್​ಪಿ ಪಟ್ಟಿಯಲ್ಲಿ ರಾಮಾಚಾರಿ ಐದನೇ ಸ್ಥಾನದಲ್ಲಿದೆ. ಸದ್ಯ ಧಾರಾವಾಹಿ ಬೇರೆಯೇ ಆದ ಆಯಾಮಕ್ಕೆ ಹೊರಳಿದೆ. ರಾಮಾಚಾರಿಗೊಬ್ಬ ತಮ್ಮನೂ ಎಂಟ್ರಿ ಕೊಟ್ಟಾಗಿದೆ. ಅಣ್ಣ-ತಮ್ಮ ಹಾಗೂ ಚಾರು ಒಂದಾಗಿ ಶತ್ರುಗಳ ವಿರುದ್ಧ ಗೆಲ್ಲುವ ಹೋರಾಟಕ್ಕೆ ಇಳಿದಿದ್ದಾರೆ.

Continue Reading

LATEST NEWS

ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

Published

on

ಕಿನ್ನಿಗೋಳಿ: ಮುಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ-ಬೂದಬಾರೆ ಜನ್ಮ ಕ್ಷೇತ್ರದ ತಾಕೊಡೆ ಮರ ಶುಕ್ರವಾರ(ಎ.3) ಮದ್ಯಾಹ್ನ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡಂತಾಗಿದೆ.

ಸುಮಾರು 800 ರಿಂದ 1000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢವಾಗಿದೆ. ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿದ್ದ ಅವಳಿ ವೀರರಾದ  ಕಾಂತಬಾರೆ-ಬೂದಬಾರೆಯರು. ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ಬಟ್ಟೆಯ ತೊಟ್ಟಿಲು ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ ಕೊಂಬೆ ಅನ್ನುವುದು ಉಲ್ಲೇಖನೀಯ. ಬೃಹದಾಕಾರದ ಈ ಮರದ ಪಡ್ದಾಯಿ ಗೆಲ್ಲು ಕೆಲ ವರ್ಷಗಳ ಹಿಂದೆ ಭಾರೀ ಗಾಳಿಮಳೆಯ ಸಂದರ್ಭ ಬಿದ್ದಿತ್ತು.

kanthabare

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

ಸುಮಾರು 2ರಿಂದ 3 ಮೀಟರ್‌ಗಳಷ್ಟು ವ್ಯಾಸವಿದ್ದ ಈ ಮರದ ಉತ್ತರ ದಿಕ್ಕಿನ ಗೆಲ್ಲು ಕೆಲ ದಿನಗಳ ಹಿಂದೆ ಬಿದ್ದಿತ್ತು. ಸುದೀರ್ಘ ಕಾಲಮಾನದಲ್ಲಿ ಅದರಷ್ಟೇ ಆದ ಯಾವುದೇ ಗಿಡ ಚಿಗುರಿದರೂ ಜೀವಂತ ಉಳಿದಿರಲಿಲ್ಲ. ಆದರೆ ಇದೀಗ ಪರ್ಯಾಯವಾಗಿ ಪಕ್ಕದಲ್ಲಿ ತಾಕೊಡೆಯ ಗಿಡವೊಂದು ಭವಿಷ್ಯದ ಸಾಕ್ಷಿಯಾಗಿ ಗೋಚರವಾಗಿದೆ. ಧಾರ್ಮಿಕ ಮಹತ್ವದ ಧರೆಗುರುಳಿದ ಮರದ ತೆರವಿಗೆ ಪೂರ್ವಭಾವಿಯಾಗಿ ಧಾರ್ಮಿಕ ಪ್ರಕ್ರಿಯೆ ಸಹಿತ ಪ್ರಶ್ನಾಚಿಂತನೆ ನಡೆಸಿ ಆ ಪ್ರಕಾರ ಮುಂದುವರಿಯಲು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಟ್ರಸ್ಟ್ ತೀರ್ಮಾನಿಸಿದೆ.

Continue Reading

FILM

ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

Published

on

ಮುಂಬೈ : ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

 

ಈ ನಡುವೆ ಶಾರುಖ್ ಖಾನ್ ಕುರಿತಾಗಿ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ ಎಂದಿದ್ದಾರೆ ಕಮಲ್.

ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Continue Reading

LATEST NEWS

Trending