Monday, January 24, 2022

ದೇಶದ ಅತ್ಯುನ್ನತ ಪ್ರಶಸ್ತಿ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ ‘ತುಳುವರು’

ನವದೆಹಲಿ: ಕರಾವಳಿಗೆ ಇಂದು ಹಿರಿಮೆಯ ಗರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮೂವರು ಸಾಧಕರಿಗೆ ದೇಶದ ಅತ್ಯುನ್ನತ ಗೌರವಕ್ಕೆ ಭಾಜನರಾಗಿದ್ದಾರೆ.

ಏಕಕಾಲದಲ್ಲಿ ಕರಾವಳಿಯ  ಮೂವರು ತುಳುವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ ಪಡೆದಿರುವುದು ಇತಿಹಾಸ ನಿರ್ಮಿಸಿದೆ.


ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಮಾಜಿ ಕೇಂದ್ರದ ರಕ್ಷಣಾ ಸಚಿವ ದಿ. ಜಾರ್ಜ್‌ ಫರ್ನಾಂಡಿಸ್‌, ನಿರ್ಯಾಣೋತ್ತರ ಪೇಜಾವರ ಮಠ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಭಾಜನರಾದರು.

ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀಗೆ ಕರಾವಳಿಯ ಅಕ್ಷರ ಸಂತ ಹರೇಕಳ ಹಾಜಬ್ಬರವರು ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ್‌ ಕೋವಿಂದ್‌ ಅವರಿಂದ ಗೌರವ ಸ್ವೀಕರಿಸಿದರು.


ದಿ. ಜಾರ್ಜ್‌ ಫರ್ನಾಂಡಿಸ್‌ ಅವರ ಪರವಾಗಿ ಅವರ ಪತ್ನಿ ಲೈಲಾ ಕಬೀರ್‌ ಪ್ರಶಸ್ತಿ ಸ್ವೀಕರಿಸದರು. ಇಂದು ಸಂಜೆ ಭಾಗ-2ರಲ್ಲಿ ನಡೆದ ಸಮಾರಂಭದಲ್ಲಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಗೌರವ ಸ್ವೀಕರಿಸಿದರು.

ಇಂದು ಸಂಜೆ ಈ ಪ್ರಶಸ್ತಿ ಪುರಸ್ಕೃತರಿಗೆ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಭೋಜನಕೂಟ ಏರ್ಪಡಿಸಲಾಗಿದೆ.

Hot Topics

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...