‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಎಲ್ಲರ ಮನಸೂರೆಗೊಂಡ ನಟಿ ಮಲೈಕಾ ಟಿ ವಸುಪಾಲ್. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಅವರು ಗಮನ ಸೆಳೆದಿದ್ದರು. ಲೀಲಾ ಆಲಿಯಾಸ್ ಎಡವಟ್ಟು ಲೀಲಾ ಆಗಿ ಮಲೈಕಾ ಟಿ ವಸುಪಾಲ್ ಎಲ್ಲರಿಗೂ ಅಚ್ಚು ಮೆಚ್ಚಾಗಿದ್ದರು.
‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿ ಜನಮನಗೆದ್ದಿದ್ದ ಮಲೈಕಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಹಾಸ್ಯನಟ ಚಿಕ್ಕಣ್ಣಗೆ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಹಿರಿತೆರೆಗೆ ಲಗ್ಗೆ ಇಟ್ಟಿದ್ದರು.
ಹೊಸ ಚಿತ್ರದಲ್ಲಿ ಉಪಾಧ್ಯಕ್ಷನ ಬೆಡಗಿ :
‘ಉಪಾಧ್ಯಕ್ಷ’ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದಿದೆ. ಅಲ್ಲೂ ಮಲೈಕಾ ಅವರ ನಟನೆಗೆ ಪ್ರೇಕ್ಷಕ ಮಹಾಶಯ ಬೆರಗಾಗಿದ್ದಾನೆ. ಸಿನಿಮಾದಲ್ಲಿನ ಅವರ ನಟನೆ ಇನ್ನೂ ಕೂಡಾ ಪ್ರೇಕ್ಷಕರ ಮನದಲ್ಲಿ ಹಸಿರಾಗಿರುವಾಗಲೇ ಮಗದೊಂದು ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿಯನ್ನು ಮಲೈಕಾ ಹೊರಹಾಕಿದ್ದಾರೆ. ಮಲೈಕಾ ಟಿ ವಸುಪಾಲ್ ‘ವಿದ್ಯಾಪತಿ’ ಅನ್ನುವ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಮಲೈಕಾ ವಸುಪಾಲ್ ನಟಿಸುತ್ತಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಈ ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ ಮಲೈಕಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಈಗ ‘ವಿದ್ಯಾಪತಿ’ಯಲ್ಲೂ ನಟಿಸುತ್ತಿರುವ ಬಗ್ಗೆ ಘೋಷಿಸಿದ್ದಾರೆ. ಹಾಗಾಗಿ ಮಲೈಕಾ ಮತ್ತೆ ಕಿರುತೆರೆಗೆ ಲಗ್ಗೆ ಇಡೋದು ಡೌಟ್.
ಅಸಲಿ ಸಂಗತಿಯೆಂದರೆ ‘ಉಪಾಧ್ಯಕ್ಷ’ ಸಿನಿಮಾದಲ್ಲಿನ ಮಲೈಕಾ ಅವರ ನಟನೆ ನೋಡಿ ಆಕೆಯನ್ನು ‘ವಿದ್ಯಾಪತಿ’ ಸಿನಿಮಾಗೂ ಆಯ್ಕೆ ಮಾಡಲಾಯಿತಂತೆ. ಅಂದ ಹಾಗೆ ‘ವಿದ್ಯಾಪತಿ’ ಸಿನಿಮಾದಲ್ಲಿ ನಟ ನಾಗಭೂಷಣ್ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ಮಲೈಕಾ ವಸುಪಾಲ್ ಜೊತೆಯಾಗಲಿದ್ದಾರೆ.
ಡಾಲಿ ಧನಂಜಯ್ ನಿರ್ಮಾಣ :
ನಟ ಡಾಲಿ ಧನಂಜಯ್ ಅವರ ನಿರ್ಮಾಣದ ಈ ಚಿತ್ರವನ್ನು ಒಪ್ಪಿಕೊಂಡಿರುವ ಮಲೈಕಾ, “ನಾನು ಹಿಟ್ಲರ್ ಕಲ್ಯಾಣ ಧಾರಾವಾಹಿ ಮಾಡುತ್ತಿರುವಾಗಲೇ ಹಲವಾರು ಕಥೆಗಳನ್ನು ಕೇಳಿದೆ. ಆದರೆ ಯಾವುದು ಹಿಡಿಸಲಿಲ್ಲ. ‘ವಿದ್ಯಾಪತಿ’ ಸಿನಿಮಾದ ಕಥೆ ಮಾತ್ರ ಬಹಳ ವಿಭಿನ್ನವಾಗಿದೆ ಎಂದು ಅನಿಸಿತು. ಹಾಗಾಗಿ ಒಪ್ಪಿಕೊಂಡಿದ್ದೇನೆ. ಡಾಲಿ ಧನಂಜಯ್ ಅವರ ನಿರ್ಮಾಣದಲ್ಲಿ ಆಗುತ್ತಿರುವ ಈ ಸಿನಿಮಾದ ಬಗ್ಗೆ ನನಗೆ ಹೆಚ್ಚಿನ ವಿಶ್ವಾಸವಿದೆ” ಎಂದು ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಲೈಕಾ ಹೇಳಿಕೊಂಡಿದ್ದರು.
ಇದರ ಜೊತೆಗೆ ‘ವಿದ್ಯಾಪತಿ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ ನಟಿ ಮಲೈಕಾ ವಸುಪಾಲ್ . ‘ವಿದ್ಯಾಪತಿ’ ಸಿನಿಮಾದಲ್ಲಿ ನನ್ನದು ಒಂದು ಹೋಮ್ಲಿ ಪಾತ್ರ. ಇದರಲ್ಲಿ ನಾನು ಬಹಳ ಸಿಂಪಲ್ ಆಗಿ ಕಾಣಿಸಿಕೊಳ್ಳಲಿದ್ದೇನೆ. ಇನ್ನು ನಾಗಭೂಷಣ್ ಅವರು ಒಳ್ಳೆಯ ನಟ. ಮಾರ್ಚ್ ಕೊನೆಯ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ” ಎಂದು ಹೇಳಿದ್ದಾರೆ.
ಸಮಂತಾ ರುತ್ ಪ್ರಭು ವಿಚ್ಛೇದನದ ಬಳಿಕ ಸಾಕಷ್ಟು ನೋವು ಅನುಭವಿಸಿದ್ದರು. ನಾಲ್ಕು ವರ್ಷಗಳ ಕಾಲ ನಾಗ ಚೈತನ್ಯ ಜೊತೆ ಸಂಸಾರ ನಡೆಸಿದ ಸಂಸಾರ ಈಗ ಕೊನೆಯಾಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ನಾಗ ಚೈತನ್ಯ ಮತ್ತೊಂದು ಮದುವೆ ಆಗುತ್ತಿದ್ದಾರೆ. ವಿಚ್ಛೇದನದ ಬಳಿಕ ಸಮಂತಾ ಸಾಕಷ್ಟು ನೋವು ಅನುಭವಿಸಿದ್ದರು. ಸಮಂತಾ ಎದುರಿಸಿದ ತೊಂದರೆಗಳ ಬಗ್ಗೆ, ಕೇಳಿದ ಪದಗಳ ಬಗ್ಗೆ ಬಹಳ ದುಖದಿಂದ ಹೇಳಿಕೊಂಡಿದ್ದಾರೆ.
‘ನಾನು ವಿಚ್ಛೇದನ ಪಡೆದಾಗ ಜನರು ಸೆಕೆಂಡ್ ಹ್ಯಾಂಡ್, ಬಳಕೆ ಆದವಳು ಎಂದು ಕರೆಯುತ್ತಿದ್ದರು. ಈ ರೀತಿಯ ಸಾಕಷ್ಟು ಕಮೆಂಟ್ಗಳು ಬರುತ್ತಿದ್ದವು. ವಿಚ್ಛೇದನ ಪಡೆದ ಬಳಿಕ ಮಹಿಳೆಯರು ಹಾಗೂ ಕುಟುಂಬದವರು ತುಂಬಾನೇ ಕಷ್ಟ ಅನುಭವಿಸಬೇಕಾಗುತ್ತದೆ’ ಎಂದಿದ್ದಾರೆ ಸಮಂತಾ.
‘ಆರಂಭದಲ್ಲಿ ಇದು ಸಾಕಷ್ಟು ನೋವುಂಟು ಮಾಡಿತ್ತು. ನಾನು ವಿಚ್ಛೇದನ ಪಡೆದಿರುವುದು ಕಾಲ್ಪನಿಕ ಕಥೆಯಲ್ಲ. ಹಾಗೆಂದು ನಾನು ಮೂಲೆಯಲ್ಲಿ ಕುಳಿತು ಅಳುತ್ತಾ ಇರುತ್ತೇನೆ ಎಂದರ್ಥವಲ್ಲ. ಅದನ್ನು ಮರೆ ಮಾಚುವ ಅಗತ್ಯವಿಲ್ಲ. ನನ್ನ ಜೀವನ ಇಲ್ಲಿಗೆ ಕೊನೆಯಾಗಿದೆ ಎಂದರ್ಥವಲ್ಲ. ಎಲ್ಲಿ ಕೊನೆಯಿದೆಯೋ ಅಲ್ಲಿಂದಲೇ ಆರಂಭವಿರುತ್ತದೆ’ ಎಂದಿದ್ದಾರೆ ಸಮಂತಾ. ಈ ಮೂಲಕ ನಡೆದ ಘಟನೆಯನ್ನು ಒಪ್ಪಿ ಮುಂದೆ ಸಾಗಿರುವುದಾಗಿ ತಿಳಿಸಿದ್ದಾರೆ.
ಸಿನಿಮಾ ವಿಚಾರದಲ್ಲಿ ಸಮಂತಾ ಗುಡ್ನ್ಯೂಸ್ ನೀಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. 2017ರಲ್ಲಿ ನಾಗ ಚೈತನ್ಯ ಜೊತೆ ಸಮಂತಾ ಮದುವೆ ಗೋವಾದಲ್ಲಿ ಅದ್ದೂರಿಯಾಗಿ ನೆರವೇರಿತ್ತು. 2021ರಲ್ಲಿ ವಿಚ್ಚೇಧನವಾಗಿತ್ತು. ಸದ್ಯ ನಾಗ ಚೈತನ್ಯ ಅವರು ಶೋಭಿತಾ ದುಲಿಪಾಲ್ನ ವಿವಾಹ ಆಗುತ್ತಿದ್ದಾರೆ.
ಉಡುಪಿ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು.
ನಟ ಸೂರ್ಯ ಹಾಗೂ ಜ್ಯೋತಿಕಾ ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಕರ್ನಾಟಕದಲ್ಲೂ ಸಹ ಸೂರ್ಯ ಹಾಗೂ ಜ್ಯೋತಿಕಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.
ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ರ ರಿಯಾಲಿಟಿ ಶೋ 119ನೇ ದಿನಕ್ಕೆ ಕಾಲಿಡುತ್ತಿದೆ. ಅದರ ನಡುವೆ ವಾರ ವಾರ ಎಲಿಮಿನೇಟ್ ಪ್ರಕ್ರಿಯೆ ತೀವ್ರ ಕೂತುಹಲ ಕೆರಳಿಸಿದೆ. ಈ ವಾರ ಬಿಗ್ ಬಾಸ್ ನಿಂದ ಧರ್ಮ ಕೀರ್ತಿರಾಜ್ ಎಲಿಮೀನೆಟ್ ಆಗಿ ಹೊರಬಂದಿದ್ದಾರೆ.
ಸದಾ ನಗುಮುಖದಲ್ಲೇ ಕಾಣಿಸಿಕೊಳ್ಳುವ ಧರ್ಮ, ಯಾರ ತಂಟೆಗೂ ಹೊಗುತ್ತಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದ್ದರು. ಆದರೆ ಧರ್ಮ ಮತ್ತು ಅನುಷಾ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ ಅನುಷಾ ಈ ಮೊದಲೇ ಎಲಿಮಿನೇಟ್ ಆಗಿದ್ದರು. ಇದು ಧರ್ಮ ಅವರಿಗೆ ಬೇಸರ ಮೂಡಿಸಿತ್ತು.
ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಚೈತ್ರಾ ಉಳಿದುಕೊಂಡಿದ್ದರು. ಫೈನಲ್ ಆಗಿ ಧರ್ಮ ಮನೆಯಿಂದ ಹೊರಬಂದರು. ಧರ್ಮ ಬೇಸರದಿಂದಲೇ ಹೊರನಡೆದರು.
ಧರ್ಮ ಸದಾ ಕೂಲ್ ಆಗಿಯೇ ಇರುತ್ತಾರೆ. ಅವರು ಯಾವುದೇ ಕಿತ್ತಾಟಕ್ಕೂ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇನ್ನೊಂದು ಕಡೆ, ಧರ್ಮ ಎಲ್ಲಿಯೂ ಕೂಡ ಹೈಲೈಟ್ ಆಗುತ್ತಿರಲಿಲ್ಲ. ಇವರಿಗಿಂತ ನಂತರ ವೈಲ್ಡ್ ಕಾರ್ಡ್ ನಲ್ಲಿ ಬಂದ ಹನುಮಂತ, ರಜತ್ ಹಾಗೂ ಶೋಭಾ ಶೆಟ್ಟಿ ಈಗಗಾಲೇ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ.
ಧರ್ಮ ಶಾಂತತೆಯ ಸ್ವರೂಪವನ್ನು ಹೊಂದಿರುವ ವ್ಯಕ್ತಿತ್ವ. ಈ ಮೊದಲು ಎಲಿಮಿನೇಟ್ ಆಗಿರುವ ಲಾಯರ್ ಜಗದೀಶ್ ವಿರುದ್ದ ಇಡೀ ಮನೆಯೇ ತಿರುಗಿ ಬಿದ್ದಾಗಲೂ ಧರ್ಮ ಫೈಟ್ ಗೆ ಹೋಗಿರಲಿಲ್ಲ. ಇದು ಅವರ ಮುಗ್ದತೆ ಮತ್ತು ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ.
ಬಿಗ್ ಬಾಸ್ ಮನೆ ಎಂದರೆ ನೆನಪಾಗುವುದೇ ಜಗಳ, ಕೋಪ ಮತ್ತು ಮಾತುಗಾರಿಕೆ. ಎಲ್ಲೋ ಒಂದು ಕಡೆ ಧರ್ಮ ಅವರಿಗೆ ತಮ್ಮ ತಾಳ್ಮೆಯೇ ಮುಳುವಾಗಿ ಎಲಿಮಿನೇಟ್ ಆಗಲು ಕಾರಣವಾಯಿತು ಎಂದು ಹೇಳಬಹುದು.