Thursday, October 21, 2021

ಜೈಲಿನಲ್ಲಿರುವ ಕೈದಿಗಳಿಗೆ ಹೆಚ್‍ಐವಿ ಪಾಸಿಟಿವ್: ಸೋಂಕು ತಗುಲಿದ್ದು ಹೇಗೆ?

ಅಸ್ಸಾಂ: ಇಲ್ಲಿನ ನಾಗಾಂವ್‍ನ ಕೇಂದ್ರ ಹಾಗೂ ವಿಶೇಷ ಜೈಲಿನ 85 ಕೈದಿಗಳಿಗೆ ಹೆಚ್‍ಐವಿ ಪಾಸಿಟಿವ್ ಸೋಂಕು ತಲುಗಲಿದೆ.


ವಿಶೇಷ ಜೈಲಿನ 45 ಹಾಗೂ ಕೇಂದ್ರ ಕಾರಾಗೃಹದ 40 ಕೈದಿಗಳನ್ನು ಶುಕ್ರವಾರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು.

ಈ ವೇಳೆ ಎಲ್ಲರೂ ಹೆಚ್‍ಐವಿ ಪೀಡಿತರಾಗಿರುವುದು ಬೆಳಕಿಗೆ ಬಂದಿದೆ ಎಂದು ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯ ಡಾ. ನಾಥ್ ಅವರು ತಿಳಿಸಿದ್ದಾರೆ.
ಕಳೆದ ತಿಂಗಳು ಇದೇ ಜೈಲಿನ 88 ಕೈದಿಗಳಲ್ಲಿ ಹೆಚ್‍ಐವಿ ಪಾಸಿಟಿವ್ ಸೋಂಕು ತಗುಲಿದ ವರದಿಯಾಗಿತ್ತು. 88 ಜನರ ಪೈಕಿ ನಾಲ್ಕು ಜನ ಮಹಿಳಾ ಖೈದಿಗಳಿಗೆ ಪಾಸಿಟಿವ್ ಸೋಂಕು ತಗುಲಿತ್ತು.
ಸೋಂಕು ಹರಡಿದ್ದು ಹೇಗೆ ?
ಜೈಲುವಾಸಿಗಳಿಗೆ ಹೆಚ್‍ಐವಿ ಸೋಂಕು ತಗುಲಿದ್ದು ಹೇಗೆ ಎನ್ನುವ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದಾರೆ.

ಇವರೆಲ್ಲ ಡ್ರಗ್ಸ್ ವೈಸನಿಗಳಾಗಿದ್ದಾರೆ. ಡ್ರಗ್ಸ್ ತೆಗೆದುಕೊಳ್ಳಲು ಒಂದೇ ಸಿರಂಜಿಯನ್ನು ಎಲ್ಲರೂ ಬಳಸಿದ್ದರಿಂದಾಗಿ ಸೋಂಕು ಹರಡಿದೆ ಎಂದು ತಿಳಿದು ಬಂದಿದೆ.

ಇನ್ನು ಜೈಲುವಾಸಿಗಳಿಗೆ ಹೆಚ್‍ಐವಿ ಸೋಂಕು ಹರಡಲು ಡ್ರಗ್ಸ್ ತೆಗೆದುಕೊಳ್ಳಲು ಬಳಿಸಿದ ಸಿರಂಜಿ ಕಾರಣ ಎನ್ನುವ ಅಂಶ ಬೆಳಕಿಗೆ ಬರುತ್ತಿದ್ದಂತೆ ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...