Friday, August 19, 2022

ಮತ್ತೆ ಆಸ್ಪತ್ರೆಗೆ ದಾಖಲಾದ ಗೃಹ ಸಚಿವ ಅಮಿತ್ ಶಾ..!?

ಮತ್ತೆ ಆಸ್ಪತ್ರೆಗೆ ದಾಖಲಾದ ಗೃಹ ಸಚಿವ ಅಮಿತ್ ಶಾ..!?

ನವದೆಹಲಿ : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್​ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಧ್ಯರಾತ್ರಿ ವೇಳೆಗೆ ಅಮಿತ್​ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಅಮಿತ್ ಶಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆಗಸ್ಟ್​ 2ರಂದು ಶಾ ಅವರಿಗೆ ಕೊರೋನಾ ಇರುವುದು ದೃಢಪಟ್ಟಿತ್ತು.

ಈ ಸಂದರ್ಭ ಟ್ವೀಟ್​ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.

ಆಗಸ್ಟ್ 14ರಂದು ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಮನೆಗೆ ತೆರಳಿದ್ದರು. ಈಗ ಅವರಿಗೆ ಮತ್ತೆ ಉಸಿರಾಟದ ತೊಂದರೆ ಹಾಗೂ ಮೈಕೈ ನೋವು ಕಾಣಿಸಿಕೊಂಡಿರುವುದರಿಂದ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...