ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ ಪತ್ನಿಯೊಂದಿಗೆ ತಮ್ಮ ನಿವಾಸದ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ನಾಗರಿಕರು ತಮ್ಮ ಮನೆಗಳಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸುವಂತೆ ಉತ್ತೇಜಿಸಲು ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬುವುದು ಈ ಅಭಿಯಾನದ ಉದ್ದೇಶವಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದ ನಾಗರಿಕರೆಲ್ಲರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಅಲ್ಲದೇ, ತಮ್ಮ ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್ನಲ್ಲಿ ತಿರಂಗಾ ಚಿತ್ರವನ್ನು ಹಾಕಿಕೊಳ್ಳುವಂತೆ ಹೇಳಿದ್ದರು.