ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರಕ್ಷಿಸಿದ್ದಾರೆ.
ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೆರವಿನಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕಾರು ಅಪಘಾತದಲ್ಲಿ ಪ್ರಯಾಣಿಕರನ್ನು ರಕ್ಷಿಸಿದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಕಾರ್ಕಳಕ್ಕೆ ತೆರಳಲು ಸಹ ನೆರವಾಗಿದ್ದು ಇತರರಿಗೆ ಮಾದರಿಯಾಗಿದ್ದಾರೆ.
ಈ ಘಟನೆ ಕುರಿತಂತೆ ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಶಿವಮೊಗ್ಗಕ್ಕೆ ಹೋಗುವ ವೇಳೆ, ಪ್ರಯಾಣಿಕರ ಜೊತೆ ಮಾತನಾಡಲಾಯಿತು.
ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿ, ಕಾರಿನಲ್ಲಿದ್ದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಕಾರ್ಕಳಕ್ಕೆ ತೆರಳಲು ನೆರವಾಗಲಾಯಿತು ಎಂದು ಬರೆದುಕೊಂಡಿದ್ದಾರೆ.