Wednesday, December 1, 2021

ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ ಖಂಡಿತ : ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ..!

ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ ಖಂಡಿತ : ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ..!

ಉಡುಪಿ: ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಯಾಗುವುದು ಖಂಡಿತ. ಕಾನೂನು ಜಾರಿ ವಿಷಯದಲ್ಲಿ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಉತ್ತರ ಪ್ರದೇಶ ಸರ್ಕಾರ ಈಚೆಗೆ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿದೆ. ಅದರ ಪ್ರತಿಯನ್ನು ಪಡೆಯಲು ತಾನು ಅಧಿಕಾರಿಗಳಿಗೆ ಹೇಳಿದ್ದೇನೆ.ಜೊತೆಗೆ ಮಧ್ಯಪ್ರದೇಶ, ಹರ್ಯಾಣ ರಾಜ್ಯಗಳಲ್ಲಿ ಜಾರಿಯಾಗುವ ಲವ್‌ ಜಿಹಾದ್ ಕಾನೂನನ್ನು ಅಧ್ಯಯನ ಮಾಡಿ, ಯಾವ ಅಂಶಗಳನ್ನು ಸೇರಿಸಬೇಕು ಎಂದು ನಿರ್ಧರಿಸಲಾಗುವುದು ಎಂದರು.

ಮಂಗಳೂರಿನಲ್ಲಿ ಈಚೆಗೆ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಸಿಎಂ ಕೂಡ ಲವ್ ಜಿಹಾದ್ ಕಾನೂನು ಜಾರಿ ಖಚಿತ ಎಂದು ಹೇಳಿದ್ದಾರೆ. ಮೊಘಲರ ಕಾಲದಿಂದಲೂ ಲವ್ ಜಿಹಾದ್ ಇದೆ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು ಸಿದ್ದರಾಮಯ್ಯ ಇನ್ನೂ ಮೊಘಲರ ಕಾಲದಲ್ಲಿಯೇ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...