Connect with us

    DAKSHINA KANNADA

    ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    Published

    on

    ಮಂಗಳೂರು: ಹಲ್ಲಿಗಳು ಯಾವಾಗಲೂ ನಮಗಿಂತ ಹೆಚ್ಚಾಗಿ ನಮ್ಮ ಮನೆಯಲ್ಲಿ ಸುತ್ತಾಡುತ್ತಿರುತ್ತವೆ. ಕೆಲವರ ಮನೆಯಲ್ಲಿ ಹಲ್ಲಿಗಳಿದ್ದರೆ ಇನ್ನು ಹಲವರಿಗೆ ನಡುಕ, ಹಲ್ಲಿ ಹತ್ತಿರ ಬಂದರೆ ಬಹಳ ದೂರ ಓಡಿ ಹೋಗುತ್ತಾರೆ. ಹಲ್ಲಿಯಿಂದ ಓಡಿಹೋಗುವ ಭಯವನ್ನು ಹರ್ಪಿಟೋಫೋಬಿಯಾ ಎಂದು ಕರೆಯಲಾಗುತ್ತದೆ. ಮತ್ತೊಂದೆಡೆ, ಅಡುಗೆ ಮನೆಯಲ್ಲಿ ಹಲ್ಲಿ ಇದ್ದರೆ, ಅಡುಗೆ ಮಾಡುವಾಗ ಅದರೊಳಗೆ ಬೀಳುವ ಭಯವಿದೆ. ಆದ್ದರಿಂದ, ಮನೆಯಿಂದ ಹಲ್ಲಿಗಳನ್ನು ತೊಡೆದುಹಾಕುವ ಸಿಂಪಲ್​ ಮನೆಮದ್ದು ಇಲ್ಲಿ ತಿಳಿದುಕೊಳ್ಳಿ.

    ಈರುಳ್ಳಿ:

    ಈರುಳ್ಳಿಯನ್ನು ಅಡುಗೆಗೆ ಮಾತ್ರ ಬಳಸಲಾಗುವುದಿಲ್ಲ, ಬದಲಾಗಿ ಅಡಿಗೆಮನೆಗಳಿಂದ ಹಲ್ಲಿಗಳನ್ನು ಹಿಮ್ಮೆಟ್ಟಿಸಬಹುದು. ಈರುಳ್ಳಿಯಿಂದ ಹೊರಹೊಮ್ಮುವ ಕಟುವಾದ ವಾಸನೆಯು ಹಲ್ಲಿಗಳನ್ನು ಓಡಿಸುತ್ತದೆ. ಈರುಳ್ಳಿಯನ್ನು ಕತ್ತರಿಸಿ, ಹಲ್ಲಿ ಬರುವ ಸ್ಥಳದಲ್ಲಿ ತುಂಡರಿಸಿ ಇಡಿ. ಅದರಿಂದ ಬರುವ ವಾಸನೆಯಿಂದ ಹಲ್ಲಿ ಮನೆಯೊಳಗೆ ಬರುವುದಿಲ್ಲ. ಹಾಗೆಯೇ ಹಲ್ಲಿಗಳನ್ನು ಗೋಡೆಯಿಂದ ಓಡಿಸಲು ಈರುಳ್ಳಿಯನ್ನು ಸುಲಿದು ಅದರ ತುಂಡುಗಳನ್ನು ದಾರದಿಂದ ಕಟ್ಟಿ ಗೋಡೆಗೆ ನೇತು ಹಾಕಿ.

    ಬೆಳ್ಳುಳ್ಳಿ:

    ಮನೆಯಲ್ಲಿ ಹಲ್ಲಿಗಳನ್ನು ಬರದಂತೆ ತಡೆಯಲು ಬೆಳ್ಳುಳ್ಳಿಯನ್ನು ಬಳಸಬಹುದು. ಮನೆಯಲ್ಲಿ ಹಲ್ಲಿಗಳು ಓಡಾಡುವ ಕಿಟಕಿ, ಬಾಗಿಲು ಮುಂತಾದ ಸ್ಥಳಗಳಲ್ಲಿ ಬೆಳ್ಳುಳ್ಳಿಯನ್ನು ಕತ್ತರಿಸಿ ಇಡಿ. ಬೆಳ್ಳುಳ್ಳಿಯ ಬಲವಾದ ವಾಸನೆಯು ಹಲ್ಲಿಗಳನ್ನು ಹಿಮ್ಮೆಟ್ಟಿಸುತ್ತದೆ. ಇದಲ್ಲದೇ ಹಲ್ಲಿ ಬರುವ ಜಾಗದಲ್ಲಿ ಬೆಳ್ಳುಳ್ಳಿಯನ್ನು ಪುಡಿ ಮಾಡಿ ಸ್ವಲ್ಪ ನೀರು ಚಿಮುಕಿಸಿದರೆ ಮತ್ತೆ ಬರುವುದಿಲ್ಲ.

    ಪೆಪ್ಪರ್ ಸ್ಪ್ರೇ:

    ಪೆಪ್ಪರ್ ಸ್ಪ್ರೇ ಮತ್ತು ಚಿಲ್ಲಿ ಸ್ಪ್ರೇ ಬಳಸಿ ಮನೆಗಳ ಸುತ್ತ ತಿರುಗುವ ಹಲ್ಲಿಗಳನ್ನು ಸಹ ಹಿಮ್ಮೆಟ್ಟಿಸಬಹುದು. ಸ್ಪ್ರೇನಿಂದ ಬಲವಾದ ವಾಸನೆಯು ಹಲ್ಲಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುತ್ತದೆ. ನೀವು ಮಾರುಕಟ್ಟೆಯಲ್ಲಿ ಪೆಪ್ಪರ್ ಸ್ಪ್ರೇ ಖರೀದಿಸಲು ಬಯಸದಿದ್ದರೆ, ನೀವು ಮನೆಯಲ್ಲಿಯೇ ಪೆಪ್ಪರ್ ಸ್ಪ್ರೇ ತಯಾರಿಸಬಹುದು. ಮೊದಲು ಸ್ವಲ್ಪ ಮೆಣಸು ತೆಗೆದುಕೊಂಡು ಪುಡಿ ಮಾಡಿ. ಈಗ ಅದನ್ನು ನೀರಿನೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ಈಗ ಹಲ್ಲಿಗಳು ಇರುವ ಸ್ಥಳಗಳಲ್ಲಿ ಸ್ಪ್ರೇ ಮಾಡಿದರೆ ಮತ್ತೆ ತೊಂದರೆ ಆಗುವುದಿಲ್ಲ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    DAKSHINA KANNADA

    ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!

    Published

    on

    ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ  ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

    ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ  ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.

    ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ

    ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    Continue Reading

    DAKSHINA KANNADA

    ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ

    Published

    on

    ಉಪ್ಪಿನಂಗಡಿ : ಕುಡಿತದ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬರು ವ್ಯಾಟ್ಸಾಪ್‌ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ  ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ.

    ಲೋಹಿತ್ ಕುಮಾರ್ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ವಿಪರೀತವಾದ ಮದ್ಯಪಾನದ ಚಟ ಅಂಟಿಸಿಕೊಂಡಿದ್ದರು. ಇದೇ ಕಾರಣದಿಂದ ನಿತ್ಯ ಪತ್ನಿ ಹಾಗೂ ಮಕ್ಕಳ ಜೊತೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ಪತ್ನಿ ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೊರಟು ಹೋಗಿದ್ದರು. ಇದರಿಂದ ಮನನೊಂದ ಲೋಹಿತ್ ಕುಮಾರ್ ಸೆಪ್ಟಂಬರ್ 18 ರಂದು ಗುಂಡ್ಯಕ್ಕೆ ಹೋಗಿ ವಾಪಾಸಾದವರು ಮನೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ : ಹೆಣ್ಣು ಕೊಟ್ಟ ಅತ್ತೆ-ಮಾವನನ್ನೇ ಕೊಂ*ದ ಪಾಪಿ ಅಳಿಯ

    ತಾನು ಆತ್ಮಹ*ತ್ಯೆಯ ಮಾಡಿಕೊಳ್ಳುವುದಾಗಿ ವ್ಯಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಸಂದೇಶವನ್ನು ಮಂಗಳೂರಿನಲ್ಲಿದ್ದ ಲೋಹಿತ್‌ ಸಹೋದರನ ಮಗಳು ನೋಡಿ ಮಾಹಿತಿ ನೀಡಿದ್ದರು. ಸೆಪ್ಟಂಬರ್ 19 ರ ಮುಂಜಾನೆ ಲೋಹಿತ್ ವಾಸವಾಗಿದ್ದ ಮನೆಗೆ ಹೋಗಿ ನೋಡಿದಾಗ ಮನೆಯ ಹಾಲ್‌ನಲ್ಲಿ ನೇ*ಣು ಬಿಗಿದ ಸ್ಥಿತಿಯಲ್ಲಿ ಅವರ ಮೃ*ತದೇಹ ಪತ್ತೆಯಾಗಿದೆ.  ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending