Home ಪ್ರಮುಖ ಸುದ್ದಿ ದೆಹಲಿ ಸಿಎಎ ಗಲಭೆ: ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿಕೆ

ದೆಹಲಿ ಸಿಎಎ ಗಲಭೆ: ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿಕೆ

ದೆಹಲಿ ಸಿಎಎ ಗಲಭೆ: ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿಕೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಮೂರನೇ ದಿನವೂ ಮುಂದುವರೆದಿದೆ. ಪತ್ರಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಬಗ್ಗೆ ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ಸಾವಿನ ಸಂಖ್ಯೆ 16 ಕ್ಕೇರಿದೆ. 56 ಮಂದಿ ಪೊಲೀಸರು ಗಂಭಿರ ಗಾಯಗೊಂಡಿದ್ದಾರೆ. ಪೊಲೀಸರಿಂದ ಪರಿಸ್ಥಿತಿ ಕೈಮೀರಿದಾಗ ಪ್ಯಾರಾ ಮಿಲಿಟರಿ ಪಡೆಯನ್ನು ಬಳಸಲಾಗುತ್ತಿದೆಯಾದರೂ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

ಈಶಾನ್ಯ ದೆಹಲಿಯಲ್ಲಿ ಸೆಕ್ಷನ್ 144 ಅನ್ನು ಜಾರಿ ಮಾಡಲಾಗಿದೆ. ಈ ಮಧ್ಯೆಯೂ ಈಶಾನ್ಯ ದೆಹಲಿಯ ಮೌಜ್​ಪುರ್​ ಭಾಗದಲ್ಲಿ ಅನೇಕ ಅಂಗಡಿ, ಕಚೇರಿ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹೀಗಾಗಿ ಮತ್ತೆ ಪರಿಸ್ಥಿತಿ ಉದ್ರಿಕ್ತಗೊಂಡಿದ್ದು ದೆಹಲಿಯ ರಕ್ಷಣಾ ಸುವ್ಯವಸ್ಥೆಯ ಹೊಣೆ ಹೊತ್ತಿದ್ದ ಪೊಲೀಸರ ಕೈಮೀರಿತ್ತು. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ.

ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದೆಹಲಿಯಲ್ಲಿ ಅರೆಸೇನಾ ಪಡೆಗಳ 35 ತುಕಡಿಗಳನ್ನು ನಿಯೋಜಿಸಲಾಗಿದೆ. ಇನ್ನು, ಗಲಭೆ ವರದಿ ಮಾಡಲು ತೆರಳಿದ ಪತ್ರಕರ್ತರ ಮೇಲೆಯೂ ಹಲ್ಲೆ ನಡೆಸಲಾಗಿದೆ, ಗಲಭೆ ನಿಯಂತ್ರಿಸುತ್ತಿದ್ದ ಅರೆ ಸೇನಾ ಪಡೆಯ ಯೋದನ ಮೇಲೆ ಆ್ಯಸಿಡ್‌ ದಾಳಿ ನಡೆದಿದ್ದು ಗಂಭೀರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಗಲಭೆ ನಡೆದಿರುವ ಸ್ಥಳದಲ್ಲಿ ಚಿತ್ರೀಕರಿಸಲಾದ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಒತ್ತಾಯಿಸಿ ಕೆಲವು ದುಷ್ಕರ್ಮಿಗಳು ವಿಡಿಯೋ ಜರ್ನಲಿಸ್ಟ್​ಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನೋರ್ವನಿಗೆ ಗುಂಡೇಟು ತಗುಲಿರುವ ಬಗ್ಗೆಯೂ ವರದಿಯಾಗಿದೆ.

ಈಶಾನ್ಯ ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆ ಸಭೆ ನಡೆಸಿದ್ದಾರೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಿಸಲು ಅಗತ್ಯವಿರುವ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ.ಭಾನುವಾರ ಸಂಜೆ ಸಿಎಎ ಪ್ರತಿಭಟನೆ ವೇಳೆ ಸಿಎಎ ವಿರೋಧಿಗಳು ಮತ್ತು ಸಿಎಎ ಪರ ಇರುವ ಗುಂಪುಗಳ ನಡುವೆ ಈಶಾನ್ಯ ದೆಹಲಿಯಲ್ಲಿ ಮಾರಾಮಾರಿ ನಡೆದು ಈ ಘಟನೆ ನಂತರ ಭಾರೀ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿತ್ತು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...