NATIONAL
ಹೋಂಡಾ QC1 ಎಲೆಕ್ಟ್ರಿಕ್ ಸ್ಕೂಟರ್ ಭಾರತಕ್ಕೆ ಎಂಟ್ರಿ !!
Published
3 weeks agoon
ಹೊಂಡಾ QC1 ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗಿದೆ. ಹೋಂಡಾ QC1 ವಿನ್ಯಾಸವು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ ನಿಂದ ಸ್ಪೂರ್ತಿ ಪಡೆದಿದೆ ಎನ್ನಬಹುದು. ಮುಂಭಾಗ, ಹ್ಯಾಂಡಲ್‌ಬಾರ್ ಮತ್ತು ಸೈಡ್ ಪ್ಯಾನೆಲ್‌ಗಳು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ನಂತೆಯೇ ಇವೆ. ಆದರೆ, ಇದು LED DRL ಹೊಂದಿಲ್ಲ.
ಹೋಂಡಾ QC1 1.8kW BLDC ಮೋಟಾರ್‌ನಿಂದ ಚಾಲಿತವಾಗಿದೆ. ಇದು ಸ್ಕೂಟರ್ ಅನ್ನು 50kmph ವೇಗದಲ್ಲಿ ಚಲಾಯಿಸಬಲ್ಲದು. QC1 ಎರಡು ರೈಡಿಂಗ್ ಮೋಡ್‌ಗಳೊಂದಿಗೆ ಬರುತ್ತದೆ. ಅವು ಎಕಾನ್ ಮತ್ತು ಸ್ಟ್ಯಾಂಡರ್ಡ್. ಇದು ಸ್ಟ್ಯಾಂಡರ್ಡ್ 1.5kWh ಬ್ಯಾಟರಿಯಿಂದ ಚಾಲಿತವಾಗಿದೆ. ಇದು 80 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಬ್ಯಾಟರಿಯನ್ನು ಚಾರ್ಜ್ ಮಾಡಲು 4 ಗಂಟೆ 30 ನಿಮಿಷ ಬೇಕಾಗುತ್ತದೆ.
ಹೋಂಡಾ QC1 ವೈಶಿಷ್ಟ್ಯಗಳ ವಿಷಯದಲ್ಲಿ, ಸ್ಕೂಟರ್‌ನಲ್ಲಿ ಎಲ್‌ಇಡಿ ಲೈಟ್‌ಗಳು, ಐದು ಇಂಚಿನ ಎಲ್‌ಸಿಡಿ, 26 ಲೀಟರ್ ಸ್ಟೋರೇಜ್ ಮತ್ತು USB ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಇದೆ. ಚಾಸಿಸ್ ವಿಷಯದಲ್ಲಿ, ಇದು ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಟ್ವಿನ್ ಶಾಕ್ ಅಬ್ಸಾರ್ಬರ್‌ಗಳಿಂದ ಅಮಾನತುಗೊಳಿಸಲಾದ ಅಂಡರ್‌ಬೋನ್ ಫ್ರೇಮ್ ಅನ್ನು ಹೊಂದಿದೆ.
80 ಕಿ,ಮೀ. ಮೈಲೇಜ್ ಕೊಡುವ ಸ್ಕೂಟರ್ 12 ಇಂಚಿನ ಮುಂಭಾಗ ಮತ್ತು 10 ಇಂಚಿನ ಹಿಂಭಾಗದ ಚಕ್ರಗಳನ್ನು ಹೊಂದಿದೆ. ಫೆಬ್ರವರಿ 2025 ರಲ್ಲಿ ವಿತರಣೆ ಪ್ರಾರಂಭವಾದಾಗ, ಜನವರಿಯಲ್ಲಿ QC1 ಬೆಲೆಯನ್ನು ಹೋಂಡಾ ಬಹಿರಂಗಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
LATEST NEWS
ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!
Published
8 hours agoon
22/12/2024ಮಂಗಳೂರು/ಪಂಜಾಬ್: ಕಟ್ಟಡ ಕು*ಸಿತದಿಂದ ಹಿಮಾಚಲ ಪ್ರದೇಶದ 20 ವರ್ಷದ ಯುವತಿ ಸೇರಿದಂತೆ ಇಬ್ಬರು ಮೃ*ತಪಟ್ಟ ಘಟನೆ ಶನಿವಾರ (ಡಿ.21) ಸಂಜೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದ್ದು, ಹಲವರು ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಶಂ*ಕೆ ವ್ಯಕ್ತವಾಗಿ ತೀ*ವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಥಿಯೋಗ್‌ನ ದೃಷ್ಟಿ ವರ್ಮ (20) ಓರ್ವ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ ಅವಶೇಷಗಳಡಿ ಸಿಲುಕಿಕೊಂಡು ಗಂ*ಭೀರ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದರು. ಇಂದು(ಡಿ।22) ಬೆಳಗ್ಗೆ ಮತ್ತೊಬ್ಬ ವ್ಯಕ್ತಿಯ ಮೃ*ತದೇಹ ಪ*ತ್ತೆಯಾಗಿದ್ದು, ಅವರನ್ನು ಹರಿಯಾಣದ ಅಂಬಾಲಾ ಜಿಲ್ಲೆಯ ಅಭಿಷೇಕ್ ಎಂದು ಗುರುತಿಸಲಾಗಿದೆ.
ಘಟನೆಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಪರೀಕ್, “ಪ್ರಾಥಮಿಕ ತನಿಖೆಯಲ್ಲಿ, ಕಟ್ಟಡದ ಮಾಲಕರು ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ಯಾವುದೇ ಅನುಮತಿಯಿಲ್ಲದೆ ಮಣ್ಣು ತೋಡುತ್ತಿದ್ದರು” ಎಂದು ತಿಳಿಸಿದ್ದಾರೆ. ಕಳೆದ 17 ಗಂಟೆಗಳಿಂದ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇನ್ನೂ ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಶಂ*ಕೆ ವ್ಯಕ್ತವಾಗಿದೆ. ಶೇ. 60ರಷ್ಟು ಕಟ್ಟಡದ ಅ*ವಶೇಷಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡದ ಮಾಲಕರಾದ ಪರ್ವಿಂದರ್ ಸಿಂಗ್ ಹಾಗೂ ಗಗನ್ ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಸ್ಥಳದಲ್ಲಿನ ಪರಿಸ್ಥಿತಿಯ ಮೇಲೆ ಫೋನ್ ಮೂಲಕ ನಿಗಾ ವಹಿಸಿದ್ದಾರೆ.
LATEST NEWS
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
Published
10 hours agoon
22/12/2024By
NEWS DESK3ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.
ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!
ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.
ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.
ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
LATEST NEWS
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
Published
10 hours agoon
22/12/2024ಮಂಗಳೂರು/ಕೋಲ್ಕತಾ: ದೇಗುಲಗಳ ಮೇಲೆ, ಹಿಂದೂಗಳ ಮೇಲೆ ಅಲ್ಲಿನ ಮ*ತಾಂಧರು ದಾಳಿ ನಡೆಸುತ್ತಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದು, ಇದೀಗ ನಿಷೇಧಿತ ಉ*ಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹ*ತ್ಯೆ ಮತ್ತು ರಸ್ತೆ ಕಾರಿಡಾರ್ ಸ್ಫೋ*ಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಕಳೆದ ಕೆಲ ಹಿಂದೆ ಪಶ್ಚಿಮ ಬಂಗಾಳ, ಕೇರಳ ಮತ್ತು ಅಸ್ಸಾಂನಲ್ಲಿ ಬಾಂಗ್ಲಾದೇಶ ಮೂಲದ ಅನ್ಸರ್ ಅಲ್ ಇಸ್ಲಾಂ ಸಂಘಟನೆಗೆ ಸೇರಿದ 8 ಶಂಕಿತ ಉ*ಗ್ರರನ್ನು ಬಂಧಿಸಲಾಗಿತ್ತು. ಈಶಾನ್ಯ ರಾಜ್ಯಗಳಲ್ಲಿನ ಪ್ರಮುಖ ಹಿಂದೂ ನಾಯಕರ ಹ*ತ್ಯೆಯ ಉದ್ದೇಶವನ್ನು ಉ*ಗ್ರರು ಹೊಂದಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದ ಸಿಲಿಗುರಿಗೆ ಈಶಾನ್ಯ ರಾಜ್ಯಗಳ ನಂಟು ಬೆಸೆಯುವ ‘ಚಿಕನ್ ನೆಕ್’ ಎಂದು ಕರೆಯಲಾಗುವ ಸಿಲಿಗುರಿ ಕಾರಿಡಾರ್ ರಸ್ತೆ ಸ್ಫೋ*ಟಗೊಳಿಸುವ ಮೂಲಕ ಇಡೀ ಪ್ರದೇಶದಲ್ಲಿ ಅ*ಸ್ಥಿರತೆ ಸೃಷ್ಟಿಸಲು ಯತ್ನಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ಈಶಾನ್ಯ ರಾಜ್ಯಗಳಿಗೆ ಭಾರತವನ್ನು ಬೆಸೆಯುವ ಏಕೈಕ ರಸ್ತೆ ಮಾರ್ಗವಾಗಿದೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವಧಿಯಲ್ಲಿ ನಡೆದಿದ್ದ ಬಾಂಗ್ಲಾ ಪ್ರಜೆಗಳ ಬಲವಂತದ ನಾ*ಪತ್ತೆ ಹಿಂದೆ ಭಾರತದ ಕೈವಾಡವಿದೆ ಎಂದು ಬಾಂಗ್ಲಾದ ಮಧ್ಯಂತರ ಸರ್ಕಾರ ರಚಿಸಿರುವ ಸಮಿತಿಯ ವರದಿ ಹೇಳಿದೆ. ಬಾಂಗ್ಲಾದ ಸುದ್ದಿ ಸಂಸ್ಥೆ, ಸಂಗ್ಬಾದ್ ಸಂಸ್ಥೆಯು ಬಲವಂತದ ನಾ*ಪತ್ತೆಯ ಕುರಿತಾದ ತನಿಖಾ ವರದಿಯನ್ನು ಉಲ್ಲೇಖಿಸಿ ವರದಿ ನೀಡಿದ್ದು, ‘ಬಾಂಗ್ಲಾದೇಶದ ಬಲವಂತದ ನಾ*ಪತ್ತೆ ಪ್ರಕರಣಗಳಲ್ಲಿ ಭಾರತೀಯರ ಪಾಲ್ಗೊಳ್ಳುವಿಕೆ ಸಾರ್ವಜನಿಕ ದಾಖಲೆಯ ವಿಷಯವಾಗಿದೆ. ಭಾರತದಲ್ಲಿ ಇನ್ನೂ ಬಂಧಿಯಾಗಿರುವ ಯಾವುದೇ ಬಾಂಗ್ಲಾದೇಶದ ನಾಯಕರನ್ನು ಗುರುತಿಸಲು ತಮ್ಮ ಪ್ರಯತ್ನಗಳನ್ನು ವಿಸ್ತರಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳಿಗೆ ಶಿಫಾರಸ್ಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಈ ಜಾಡು ಅನುಸರಿಸುವುದು ನ್ಯಾಯದ ವ್ಯಾಪ್ತಿಯನ್ನು ಮೀರುತ್ತದೆ’ ಎಂದು ತನಿಖಾ ಆಯೋಗದ ವರದಿ ಉಲ್ಲೇಖಿಸಿದೆ.
LATEST NEWS
ದಿ*ಢೀರ್ ಹ*ಚ್ಚಿಕೊಂಡ ಬೆಂ*ಕಿ; ಆರು ಅಂಗಡಿಗಳು ಅ*ಗ್ನಿಗಾ*ಹುತಿ !!
ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!
ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS2 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- DAKSHINA KANNADA5 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು