Connect with us

    BELTHANGADY

    ನಾಗಬನದಲ್ಲಿ ಪೂಜೆ ನಡೆಯುತ್ತಿದ್ದಾಗ ಹೆಜ್ಜೇನು ದಾಳಿ; ಇಬ್ಬರು ಅರ್ಚಕರು ಸೇರಿದಂತೆ 8ಜನ ಗಂಭೀರ..!

    Published

    on

    ಬೆಳ್ತಂಗಡಿ:ನಾಗ ಬನದಲ್ಲಿ ಪೂಜೆ ನಡೆಯುತ್ತಿದ್ದ ಸಂದರ್ಭ ಜೇನು ಗೂಡಿಗೆ ಪೂಜೆಯ ಹೊಗೆ ಸೋಕಿದ್ದು, ಗೂಡಿನಲ್ಲಿದ್ದ ಹೆಜ್ಜೇನು ಹುಳಗಳು ಸ್ಥಳದಲ್ಲಿದ್ದವರ ಮೇಲೆ ದಾಳಿ ನಡೆಸಿದ ಘಟನೆ ಬೆಳ್ತಂಗಡಿಯ ನಾವೂರಿನ ಕುಂಡಡ್ಕ ಅರುವಾಲು ಬಾಲಕೃಷ್ಣ ಎಂಬವರ ನಾಗಬನದಲ್ಲಿ ನಡೆದಿದೆ.
    ಹೆಜ್ಜೇನು ದಾಳಿಯಲ್ಲಿ ಮೂವರು ಅರ್ಚಕರಲ್ಲಿ ಇಬ್ಬರು ಅರ್ಚಕರು ಸೇರಿದಂತೆ 8ಜನ ಗಂಭೀರ ಗಾಯಗೊಂಡಿದ್ದು, ಗಂಭೀರ ಗಾಯಗೊಂಡವರು ಉಜಿರೆ ಬೆನಕ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಉಳಿದವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

    BELTHANGADY

    ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ..! ಬಿಜೆಪಿ ಮುಖಂಡ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    Published

    on

    ಬೆಳ್ತಂಗಡಿ:  ಗಲಾಟೆ ವೇಳೆ ಅಪ್ರಾಪ್ತೆ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ್ದಾನೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮುಂದೆ ಓದಿ..; ಬೈಕ್ – ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃ*ತ್ಯು
    ಬೆಳ್ತಂಗಡಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BANTWAL

    ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ

    Published

    on

    ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.

    ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ.

    ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.

    ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.

    Continue Reading

    BANTWAL

    ಬೆಳ್ತಂಗಡಿ:ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ.

    ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಇದನ್ನು ಓದಿ: ‘ಹೊಡಿಬೇಡಿ ಪ್ಲೀಸ್’ ಎಂದು ಅಂಗಲಾಚಿದ ಕೆಜಿಎಫ್ ನಟಿ; ಕುಡಿದ ಮತ್ತಿನಲ್ಲಿ ನಡೀತಾ ಗಲಾಟೆ? ವೀಡಿಯೋ ವೈರಲ್

    Continue Reading

    LATEST NEWS

    Trending