Connect with us

LATEST NEWS

ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ಹಣ ಪೀಕಿದ ಗ್ಯಾಂಗ್ ಅಂದರ್ ಮಾಡಿದ ವಿದ್ಯಾನಗರ ಪೊಲೀಸರು..!

Published

on

ಮಹಿಳೆಯೊಂದಿಗೆ ಅಶ್ಲೀಲವಾಗಿ ವೀಡಿಯೋ ಮಾಡಿ ಬೆದರಿಸಿ 1,50,000 ರೂ. ದೋಚಿದ್ದ ಹನಿ ಟ್ರ್ಯಾಪ್ ಗ್ಯಾಂಗನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಮಹಿಳೆಯೊಂದಿಗೆ ಅಶ್ಲೀಲವಾಗಿ ವೀಡಿಯೋ ಮಾಡಿ ಬೆದರಿಸಿ 1,50,000 ರೂ. ದೋಚಿದ್ದ ಹನಿ ಟ್ರ್ಯಾಪ್ ಗ್ಯಾಂಗನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಹರೀಶ, ಚಂದ್ರು, ಗಂಗಾ ಹಾಗೂ ಗಿಡ್ಡ ಗಂಗಮ್ಮಳನ್ನು ಬಂಧಿಸಿ ಆರೋಪಿಗಳಿಂದ ಒಟ್ಟು 1,30,000 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಆರೋಪಿ ಗಂಗಾ ದೂರುದಾರನಿಗೆ ಕರೆ ಮಾಡಿ ಮಿಸ್ ಕಾಲ್ ಆಗಿದೆ ಎಂದು ಪರಿಚಯಿಸಿಕೊಂಡಿದ್ದಳು.

ನಂತರ ಪ್ರತಿನಿತ್ಯ ಫೋನ್‌ನಲ್ಲಿ ಮಾತನಾಡಿ ಹಣ ಪಡೆದಿದ್ದಾಳೆ.

ಬಳಿಕ ಗಂಗಾ, ಹರೀಶ, ಚಂದ್ರು, ಗಿಡ್ಡ ಗಂಗಮ್ಮ ಹಾಗೂ ಇನ್ನೊಬ್ಬ ಮಹಿಳೆ ಮತ್ತು ವ್ಯಕ್ತಿಯೋರ್ವನ ಜೊತೆ ಸೇರಿ ಒಳಸಂಚು ಮಾಡಿ ಮಾ.26 ರಂದು ದಾವಣಗೆರೆಗೆ ಬಂದಿದ್ದ ದೂರುದಾರನ್ನು ಊಟಕ್ಕೆ ಬರಬೇಕೆಂದು ಒತ್ತಾಯ ಮಾಡಿ ಸಿದ್ದವೀರಪ್ಪ ಬಡಾವಣೆಯ ಗಂಗಮ್ಮನ ಮನೆಗೆ ಕರೆಯಿಸಿಕೊಂಡಿದ್ದಾಳೆ.

ಊಟ ಮುಗಿಸಿ ರೂಮ್‍ಗೆ ಕರೆದೊಯ್ದಿದ್ದಾಳೆ.

ನಂತರ ಬೇರೆ ಅಡಗಿದ್ದ ಗ್ಯಾಂಗ್‍ನ ಸದಸ್ಯರು ಅವರಿದ್ದ ರೂಮ್‍ಗೆ ಹೋಗಿ ವೀಡಿಯೋ ಮಾಡಿ ಹೆದರಿಸಿದ್ದಾರೆ.

ಬಳಿಕ ಆರೋಪಿಗಳೆಲ್ಲ ಸೇರಿಕೊಂಡು ಹೆದರಿಸಿ 30 ಲಕ್ಷ ರೂ.ಗೆ ಬೇಡಿಕೆ ಇಟ್ಟು 1,50,000 ರೂ. ವಸೂಲಿ ಮಾಡಿದ್ದಾರೆ.

ಅಲ್ಲದೆ ಗಂಗಮ್ಮ ಕೂಡ ಹೆದರಿಕೊಂಡಂತೆ ನಾಟಕವಾಡಿ ಹಣ ಕೊಟ್ಟುಬಿಡಿ ಎಂದು ಹೇಳಿದ್ದಾಳೆ.

ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿದ್ಯಾನಗರ ಪೊಲೀಸರು ಪ್ರಕರಣದ ಬೆನ್ನು ಹತ್ತಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Click to comment

Leave a Reply

Your email address will not be published. Required fields are marked *

Baindooru

ಮಾರ್ಚ್​ 14 ರಿಂದ ಐಪಿಎಲ್ ಆರಂಭ

Published

on

ಮುಂಬಯಿ: 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್‌ಪಿಎನ್‌ ಟಿವಿ ವಾಹಿನಿಗೆ ಸೇರಿದ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಎಂಬ ವೆಬ್‌ಸೈಟ್ ಐಪಿಎಲ್ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್ 14ರಿಂದ ಆರಂಭವಾಗಲಿದ್ದು, ಮೇ 25ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಇದರ ಜೊತೆಗೆ ಮುಂದಿನ ಎರಡು ಆವೃತ್ತಿಗಳ ವೇಳಾಪಟ್ಟಿಯ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, 2026ರಲ್ಲಿ ಐಪಿಎಲ್ ಟೂರ್ನಿ ಮಾರ್ಚ್ 15 ರಿಂದ ಮೇ 31ರವರೆಗೆ ನಡೆದರೆ, 2027ರ ಐಪಿಎಲ್ ಮಾರ್ಚ್ 14ರಿಂದ ಮೇ 30ರವರೆಗೆ ನಡೆಯಲ್ಲಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲ ಫ್ರಾಂಚೈಸಿಗಳಿಗೆ ಬಿಸಿಸಿಐ, ಇ-ಮೇಲ್ ಮುಖಾಂತರ ವೇಳಾಪಟ್ಟಿ ರವಾವಿಸಿದೆ. ಮುಂದಿನ ಮೂರು ಆವೃತ್ತಿಗಳ ಆರಂಭ ಮತ್ತು ಅಂತ್ಯದ ಬಗ್ಗೆ ಮಾತ್ರ ಮಾಹಿತಿ ಹೊರಬಿದ್ದಿದ್ದು, ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ. ಕಳೆದ ಮೂರು ಆವೃತ್ತಿಗಳಂತೆ ಮುಂದಿನ ಆವೃತ್ತಿಯಲ್ಲೂ 74 ಪಂದ್ಯಗಳು ನಡೆಯಲಿವೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ಹೇಳಿಕೊಂಡಿದೆ.

ಇದಕ್ಕೂ ಮೊದಲು 2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಜ್ಜಾಗಿದೆ. ನವೆಂಬರ್ 24 ಮತ್ತು 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ 574 ಆಟಗಾರರ ಬಿಡ್ಡಿಂಗ್ ನಡೆಯಲಿದೆ.

Continue Reading

Baindooru

ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

Published

on

ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

Continue Reading

LATEST NEWS

ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

Published

on

ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

Continue Reading

LATEST NEWS

Trending

Exit mobile version