Connect with us

LATEST NEWS

ಶಿರಸಿಯಲ್ಲಿ ಹನಿ ಟ್ರ್ಯಾಪ್‌: ನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬೆದರಿಸಿದ ಆರೋಪಿಗಳು ಅಂದರ್..!

Published

on

ಶಿರಸಿ: ಇಲ್ಲಿನ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ.

ಪ್ರಕರಣದಲ್ಲಿ ಅಜೀತ ಶ್ರೀಕಾಂತ ನಾಡಿಗ, ದಿಲೀಪಕುಮಾರ ಶೆಟ್ಟಿ ಹಾಗೂ ಪದ್ಮಜಾ ಡಿ. ಎನ್‌ ಅವರ ಮೇಲೆ ಸುಲಿಗೆ ಶಿರಸಿಯ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕನೊಬ್ಬನಿಗೆ ಖಾಯಂ ಸರ್ಕಾರಿ ಉಪನ್ಯಾಸಕ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸಿ  ಜ. 17ರಂದು ಶಿವಮೊಗ್ಗಕ್ಕೆ ಕರೆಸಿಕೊಂಡು, ಕೋಣೆಯಲ್ಲಿ ಕೂಡಿಹಾಕಿ ನಗ್ನಗೊಳಿಸಿ, ದೂರುದಾರರ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ನಂತರ ಜ. 18ರಂದು ದೂರುದಾರರ ತಂದೆಯವರನ್ನು ಭೇಟಿ ಮಾಡಿ, ವಿಡಿಯೋ ಡಿಲೀಟ್ ಮಾಡಬೇಕು ಎಂದಾದರೆ, 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ, ಬಲವಂತವಾಗಿ ನಕಲಿ ದಾಖಲೆ ಸೃಷ್ಟಿಸಿ, ಕರಾರು ಪತ್ರ ಬರೆಸಿಕೊಂಡು, ಬ್ಲಾಂಕ್ ಚೆಕ್ ಪಡೆದುಕೊಂಡಿದ್ದರು.


ಹಣ ಕೊಡದಿದ್ದರೆ ಕೊಲೆ ಮಾಡಲಾಗುವುದು ಎಂದು ಹೆದರಿಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ದೂರು ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿ, ಆರೋಪಿಗಳನ್ನು ಹುಡುಕಿ 24 ಗಂಟೆಯೊಳಗೆ ಬಂಧಿಸಿದ್ದಾರೆ. ಈ ಮೂವರ ವಿರುದ್ಧ ಐಪಿಸಿ 386, 388, 406, 384, 342, 423, 506 ಸಹಿತ 34 ಪ್ರಕರಣಗಳು ದಾಖಲಾಗಿವೆ.

Click to comment

Leave a Reply

Your email address will not be published. Required fields are marked *

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

LATEST NEWS

Trending