ಮೈಸೂರು: ಇತ್ತೀಚೆಗಷ್ಟೇ ಅಗಲಿದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಸಲುವಾಗಿ ಈ ಈ ಪದವಿಯನ್ನು ಘೋಷಣೆ ಮಾಡಿ ಈ ಮೂಲಕವೇ ಮೈಸೂರು ವಿವಿ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದು ಈ ಕುರಿತಂತೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಣೆ ಮಾಡಿದ್ದಾರೆ.
ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಂದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಈ ಹಿಂದೆ ವರನಟ ಡಾ. ರಾಜ್‌ಕುಮಾರ್ ಅವರಿಗೂ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.