Connect with us

    LATEST NEWS

    ಭೀಕರ ಅ*ಪಘಾತ: ದ್ವಿಚಕ್ರ ಸವಾರರು ಸ್ಥಳದಲ್ಲೇ ಛಿ*ದ್ರಛಿ*ದ್ರ

    Published

    on

    ಮಂಗಳೂರು/ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಬೇರೊಂದು ವಾಹನ ಡಿ*ಕ್ಕಿ ಹೊಡೆದು ಎರಡು ದೇಹಗಳು ಛಿ*ದ್ರಗೊಂಡ ಘಟನೆ ಹುಬ್ಬಳ್ಳಿ ನಗರದ ಹೊರವಲಯ ಗೋಕುವ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ರಸ್ತೆ ಬಳಿ ಇಂದು (ಅ.15) ಬೆಳಗ್ಗೆ ನಡೆದಿದೆ.


    ಬೆಂಗಳೂರಿನ ಗೋಪಾಲಕೃಷ್ಣ ಉಪಧ್ಯಾಯ (52) ಹಾಗೂ ಧಾರವಾಡದ ಸದಾನಂದ ದೇವಾಡಿಗ (48) ಮೃ*ತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.

     

     

    ಇದನ್ನೂ ಓದಿ : ALERT: ಬೈಕ್ ಸವಾರರೇ ಗಮನಿಸಿ – ಈ ಹೆಲ್ಮೆಟ್ ಹಾಕಿದ್ರೆ 1,000 ರೂ. ದಂಡ ಫಿಕ್ಸ್!

     

    ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ನಂತರ ಇನ್ನೊಂದು ವಾಹನದ ಮೇಲೆ ಹಾಯ್ದ ಪರಿಣಾಮ ಸವಾರರಿಬ್ಬರ ದೇಹಗಳು ಛಿದ್ರವಾಗಿವೆ. ಸ್ಥಳಕ್ಕೆ ಉತ್ತರ ಠಾಣೆ ಪೊಲೀಸರು ಭೇಟಿಕೊಟ್ಟು ದೇಹಗಳನ್ನು ಕೆಎಂಸಿಆರ್‌ಐ ಶವಗಾರಕ್ಕೆ ಸ್ಥಳಾಂತರಿಸಿದ್ದಾರೆ.

    LATEST NEWS

    ಆಳ್ವಾಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ ಉದ್ಘಾಟನೆ

    Published

    on

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ದ ವತಿಯಿಂದ ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ನಿರ್ಮಾಣಗೊಂಡಿರುವ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರವು ಸೋಮವಾರ ಉದ್ಘಾಟನೆಗೊಂಡಿತು.

    ಕೇಂದ್ರವನ್ನು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್ ಸತೀಶ್ ರೈ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನದಲ್ಲಿ ನಿರ್ದಿಷ್ಟ ಗುರಿ ಮತ್ತು ಸ್ಪಷ್ಟತೆ ಇರಲಿ. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ನುಡಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿಕೊಂಡರೆ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ನುಡಿದರು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಉಪಸ್ಥಿತರಿದ್ದು ಮಾತನಾಡಿದರು. ಲೋಕನಾಥ ಬೋಳಾರ್ ಅವರ ಪತ್ನಿ ಡಾ. ದೇವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಎಸ್. ರಮಾನಂದ ಶೆಟ್ಟಿ, ಉದ್ಯಮಿ ಕಿಶೋರ್ ಶೆಟ್ಟಿ, ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಆಲ್ವಿನ್ ಪಿಂಟೊ, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.

    Continue Reading

    LATEST NEWS

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ಯುವಕ ಮೃತ್ಯು

    Published

    on

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

    ಸುಡಿಂಕಿರಿ ಮೂಲೆಯ ಚಂದ್ರಶೇಖರ (36)ರವರು ಶಂಕಿತ ಜ್ವರದ ಹಿನ್ನಲೆ ಕಳೆದ 1 ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ, ತಂಗಿ ಇದ್ದಾರೆ.

    Continue Reading

    DAKSHINA KANNADA

    WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    Published

    on

    ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ.  ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.

    ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

     

    Continue Reading

    LATEST NEWS

    Trending