LATEST NEWS
ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮುಗಿಸಿ ತೆರಳುತ್ತಿದ್ದಾಗ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು !!
ಮಂಗಳೂರು/ಗದಗ : ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ಇಂದು (ನ.06) ಬೆಳಿಗ್ಗೆ ನಡೆದಿದೆ.
ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಲಾರಿ, ಬಾಗಲಕೋಟೆಗೆ ಹೊರಟ್ಟಿದ್ದ ಕಾರು ಇದಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್
ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ.
ಅಮೆರಿಕ(ಯುಇಎಸ್)ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿರುವ ಬೆನ್ನಲ್ಲಿ ಇದು ಅಮೆರಿಕನ್ನರಿಗೆ ಅದ್ಭುತ ಗೆಲುವು ನಾವು ಇತಿಹಾಸ ನಿರ್ಮಿಸಿದ್ದೇವೆ ಎಂದು ಟ್ರಂಪ್ ಗೆಲುವನ್ನು ಘೋಷಿಸಿಕೊಂಡಿದ್ದಾರೆ.
ಫ್ಲೋರಿಡಾದ ಪಾಮ್ ಬೀಚ್ನಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೆರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಗೆಲುವು “ಅಮೆರಿಕನ್ ಜನರಿಗೆ ಭವ್ಯವಾದ ಗೆಲುವು” ಎಂದು ಕರೆದರು.ನಾವು ಇತಿಹಾಸ ನಿರ್ಮಿಸಿದ್ದೇವೆ, ಇದು ಅಮೆರಿಕಕ್ಕೆ ಸುವರ್ಣ ಯುಗ.ಈ ವರ್ಷದ ಆರಂಭದಲ್ಲಿ ಹತ್ಯೆಯ ಯತ್ನದಿಂದ ಬದುಕುಳಿದ ಟ್ರಂಪ್, “ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದ್ದಾನೆ ಎಂದು ಹೇಳಿದರು.
ಇದು ಹಿಂದೆಂದೂ ಯಾರೂ ನೋಡದ ಚಳುವಳಿಯಾಗಿದೆ. ನಾವು ನಮ್ಮ ಗಡಿಗಳನ್ನು ನಮ್ಮ ದೇಶದ ಎಲ್ಲಾ ಸಮಸ್ಯೆಯನ್ನು ಸರಿಪಡಿಸುತ್ತೇವೆ. ನಾವು ಇತಿಹಾಸವನ್ನು ನಿರ್ಮಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರಂಪ್ 25 ರಾಜ್ಯಗಳಲ್ಲಿ ಮತ್ತು ಕಮಲಾ ಹ್ಯಾರಿಸ್ 16 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿಗೆ 270 ಸ್ಥಾನಗಳಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ.
ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಮೋದಿ, ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ, ವ್ಯಾಪಾರ ವಹಿವಾಟು ಮತ್ತಷ್ಟು ಉತ್ತಮಪಡಿಸಲು ಜಂಟಿಯಾಗಿ ಹೆಜ್ಜೆ ಹಾಕೋಣ ಎಂದಿದ್ದಾರೆ.
ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ಮುಂದುವರೆಸುತ್ತಿದ್ದೀರಿ. ಭಾರತ-ಅಮೆರಿಕ ವ್ಯಾಪಕ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು, ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡೋಣ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಮೋದಿ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
LATEST NEWS
ಇನ್ಶೂರೆನ್ಸ್ ಹಣಕ್ಕಾಗಿ ಸೋದರ ಅಳಿಯನಿಂದ ಮಾವನ ಹ*ತ್ಯೆ: ಆರೋಪಿಗಳಿಗೆ ಪ್ರೇರಣೆ ಯಾವುದು ಗೊತ್ತಾ ?
ಮಂಗಳೂರು/ದಾವಣಗೆರೆ: ತೆಲುಗು ಸಿನೆಮಾ ವೀಕ್ಷಿಸಿ, ಅದರಲ್ಲಿನ ಕಥೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹ*ತ್ಯೆ ಮಾಡಿರುವಂತಹ ಘಟನೆ ದಾವಣಗೆರೆಯ ಇಮಾಮ್ ನಗರದಲ್ಲಿ ನಡೆದಿದೆ.
ಇನ್ಶೂರೆನ್ಸ್ ಹಣಕ್ಕಾಗಿ ಸೋದರ ಅಳಿಯ ಗಣೇಶ ಮತ್ತು ಸ್ನೇಹಿತರು ಸೇರಿ ದುರ್ಗೇಶ್ (32) ಎಂಬಾತನನ್ನು ಕೊ*ಲೆ ಮಾಡಿದ್ದಾರೆ. ಗಣೇಶ (24), ಅನಿಲ(18), ಶಿವಕುಮಾರ್ (25) ಮತ್ತು ಮಾರುತಿ (24) ಬಂಧಿತ ಆರೋಪಿಗಳು.
ಮೃತ ದುರ್ಗೇಶ್ ಖಾಸಗಿ ಬಸ್ ನಿಲ್ದಾಣ ಬಳಿ ಹಣ್ಣು ಮಾರಾಟ ಮಾಡಿಕೊಂಡಿದ್ದ. ಜೊತೆಗೆ ಸಾಕಷ್ಟು ಮಧ್ಯವ್ಯಸನಿ ಕೂಡ ಆಗಿದ್ದು, ಕುಡಿದು ತಿವ್ರ ಅಶಕ್ತನಾಗಿದ್ದ. ಹೀಗಾಗಿ ಒಂದು ವರ್ಷದಲ್ಲಿ ಆತ ಸಾ*ಯುತ್ತಾನೆ ಎಂದು ದುರ್ಗೇಶ್ ಹೆಸರಲ್ಲಿ ಗಣೇಶ್ 2 ಲಕ್ಷ ರೂ. ಇನ್ಶೂರೆನ್ಸ್ ಮಾಡಿಸಿದ್ದ. ದುರ್ಗೇಶ್ ಸತ್ತರೆ 40 ಲಕ್ಷ ರೂ. ಇನ್ಶೂರೆನ್ಸ್ ಸಿಗುತ್ತಿತ್ತು. ಆದರೆ, ಒಂದು ವರ್ಷವಾದರೂ ಅವನು ಸಾ*ಯದಿದ್ದಾಗ ಕಂಗಲಾದ ಗಣೇಶ್ ದುರಾಸೆಯಿಂದ ಈ ಕೃ*ತ್ಯ ಎಸಗಿದ್ದಾರೆ.
ಜನವರಿಗೆ ಮತ್ತೆ ಇನ್ಶೂರೆನ್ಸ್ ರಿನಿವಲ್ ಮಾಡಬೇಕಿತ್ತು. ಸುಮ್ಮನೆ ಇನ್ಶೂರೆನ್ಸ್ ಕಟ್ಟಿದ ಎರಡು ಲಕ್ಷ ರೂ. ಹಾಳಾಗುತ್ತದೆ ಎಂದು, ಸ್ನೇಹಿತರ ಜೊತೆ ನಗರದ ಹೊರವಲಯದಲ್ಲಿ ದುರ್ಗೇಶ್‌ನನ್ನು ಟವೆಲ್ನಿಂದ ಉಸಿರು ಬಿಗಿದು ಹ*ತ್ಯೆ ಮಾಡಿದ್ದಾರೆ.
ಇದನ್ನೂ ಓದಿ : ಮಂಗಳೂರನ್ನೇ ಬೆಚ್ಚಿಬೀಳಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಹ*ತ್ಯೆ ನಂತರ ಲಿಂಗೇಶ್ವರ ದೇವಸ್ಥಾನ ಬಳಿ ಆರೋಪಿಗಳು ಶ*ವ ಎಸೆದು ಹೋಗಿದ್ದರು. ಬಳಿಕ ಅಪರಿಚಿತರಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಗೇಶ್ ಮೃ*ತದೇಹವನ್ನು ಆಸ್ಪತ್ರೆಯಿಂದ ಮನೆಗೆ ತಂದು ಹೊಸ ಕಥೆ ಕಟ್ಟಿದ್ದಾರೆ. ಯಾರೋ ಹೊಡೆದು ಬಿಸಾಕಿ ಹೋಗಿದ್ದರು ಎಂದಿದ್ದಾರೆ.
ಅನುಮಾನಗೊಂಡ ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಕೊನೆಗೆ ಆರೋಪಿ ಗಣೇಶ್ ಸತ್ಯ ಬಾಯ್ಬಿಟ್ಟಿದ್ದಾರೆ. ಈ ಘಟನೆ ಕುರಿತು ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ಸೇವೆಯಾಟವು ಶ್ರೀ ಮಂಜುನಾಥ ಸ್ವಾಮಿ ಹಾಗೂ ಛತ್ರ ಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮೇಳದ ಯಜಮಾನ ಹರ್ಷೇಂದ್ರ ಕುಮಾರ್ ಅವರ ಶುಭಾಶೀರ್ವಾದಗಳೊಂದಿಗೆ ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಅವರು ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಶುಭಾರಂಭಗೊಂಡಿತು.
ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಮತ್ತು ಸಿಬಂದಿ ಉಪಸ್ಥಿತರಿದ್ದರು. ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ ತಿರುಗಾಟದ ಪ್ರಥಮ ಸೇವೆಯಾಟ ನಡೆಯಿತು.
- DAKSHINA KANNADA4 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- LATEST NEWS2 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್
- DAKSHINA KANNADA2 days ago
ದಕ್ಷಿಣ ಕನ್ನಡ : ಹೆಬ್ಬಾವಿನ ಬಾಯಿಂದ ಬೆಕ್ಕಿನ ರಕ್ಷಣೆಗಾಗಿ ಶೋಭಕ್ಕನ ಹರಸಾಹಸ; ವೀಡಿಯೋ ವೈರಲ್
- LATEST NEWS4 days ago
ಬಲಗೈ ಬಿಟ್ಟು ಎಡಕೈಗೆಯೇ ಯಾಕೆ ವಾಚ್ ಕಟ್ಟುವುದು ಗೊತ್ತಾ ?