Connect with us

LATEST NEWS

ಪಡುಬಿದ್ರೆ ಜಂಕ್ಷನ್ ನಲ್ಲಿ ಭೀಕರ ಸರಣಿ ರಸ್ತೆ ಅಪಘಾತ- ನಾಲ್ವರಿಗೆ ಗಂಭೀರ ಗಾಯ

Published

on

ಬಸ್ಸು ಹಾಗೂ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದೆ. ಜೊತೆಗೆ ನಿಂತಿದ್ದ ಆಟೋ ರಿಕ್ಷಾಕ್ಕೂ ಬಸ್ಸು ಡಿಕ್ಕಿ ಹೊಡೆದಿದೆ. ಈ ಘಟನೆ ಉಡುಪಿಯ ಸಮೀಪದ ಪಡುಬಿದ್ರೆ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಪಡುಬಿದ್ರೆ: ಬಸ್ಸು ಹಾಗೂ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದೆ. ಜೊತೆಗೆ ನಿಂತಿದ್ದ ಆಟೋ ರಿಕ್ಷಾಕ್ಕೂ ಬಸ್ಸು ಡಿಕ್ಕಿ ಹೊಡೆದಿದೆ. ಈ ಘಟನೆ ಉಡುಪಿಯ ಸಮೀಪದ ಪಡುಬಿದ್ರೆ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕಾರ್ಕಳ ಕಡೆಗೆ ಹೋಗುತ್ತಿದ್ದ ಬಸ್ಸು ಮೊದಲಿಗೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿತ್ತು.

ಬಳಿಕ ಕಾರ್ಕಳ ರಸ್ತೆ ಬದಿ ಇರಿಸಿದ್ದ ಟ್ರಾಫಿಕ್ ಬೂತ್‍ ಗೆ ಬಡಿದ ಬಸ್ ಮುಂದೆ ಸಾಗಿ ಆಟೋ ರಿಕ್ಷಾವೊಂದಕ್ಕೂ ಢಿಕ್ಕಿಯಾಗಿದೆ.

ರಿಕ್ಷಾ ಚಾಲಕ ಅಪಘಾತದ ಮುನ್ಸೂಚನೆಯನ್ನರಿತು ರಿಕ್ಷಾ ಬಿಟ್ಟು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರಣಿ ಅಪಘಾತದಲ್ಲಿ ಬಸ್ ನಿರ್ವಾಹಕ ಪ್ರಮೋದ್, ಪ್ರಯಾಣಿಕ ದಯಾನಂದ ಮುಲ್ಕಿ ಹಾಗೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ರಭಸಕ್ಕೆ ರಿಕ್ಷಾ ಜಖಂಗೊಂಡಿದೆ.

ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

Trending