Wednesday, June 16, 2021

ತೌಖ್ತೆ ಚಂಡಮಾರುತಕ್ಕೆ ಅಬ್ಬರಿಸುತ್ತಿರುವ ಕಡಲಲೆಗಳು: ಭೀಕರ ಹಾನಿಗೊಳಗಾದ ಕರಾವಳಿ ತೀರ..!

ಮಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತೌಕ್ತೇ ಚಂಡಮಾರುತ ಉಂಟಾಗಿದ್ದು,ಕರಾವಳಿಯಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.

ಒಂದೆಡೆ ಕೊರೊನಾ ಭೀಕರ ಅಲೆಯಿಂದಾಗಿ ತತ್ತರಿಸಿದ್ದರೆ ಇನ್ನೊಂದೆಡೆ ಇದೀಗ ತೌಖ್ತೆ ಚಂಡಮಾರುತ ಇನ್ನೇನು ಅನಾಹುತ ತರಲಿದೆಯೋ ಎನ್ನುವ  ಭೀತಿ ಎದುರಾಗಿದೆ

ದ.ಕ ಜಿಲ್ಲೆಯಲ್ಲಿ ಕಾರ್ಮೋಡ ಆವರಿಸಿದ್ದು, ಇಂದು ದಿನವಿಡೀ ಮಳೆ ಸುರಿಯುವ  ಲಕ್ಷಣ ಗೋಚರಿಸುತ್ತಿದೆ. ಇನ್ನು ಕರಾವಳಿಯಲ್ಲಿ ಇಂದಿನಿಂದ ಮೇ.16 ರವರೆಗೆ ರೆಡ್ ಅಲರ್ಟ್ ,17 -18 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಕೆಲವೆಡೆ ಮೇ.14 ರ ಶುಕ್ರವಾರ ರಾತ್ರಿಯೇ ಮಳೆ ಪ್ರಾರಂಭವಾಗಿದ್ದು ,  ಇಂದು ಕೂಡಾ ಮುಂದುವರೆದಿದೆ. ಮಳೆಯ ಜೊತೆ ಗಾಳಿ ಕೂಡ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಮುನ್ನೆಚ್ಚರಿಕಾ ಉದ್ದೇಶದಿಂದ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಈ ಕುರಿತು ಮಾಜಿ ಸಚಿವ ಯು.ಟಿ ಖಾದರ್  ಮಾತನಾಡಿ ಉಳ್ಳಾಲ ತೀರದ ಬಹುತೇಕ ಮನೆಗಳಿಗೆ ಚಂಡಮಾರುತದ ಮಳೆಯಿಂದಾಗಿ ಬಹಳಷ್ಟು ಹಾನಿಯಾಗಿದೆ, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು, ನಮ್ಮಿಂದಾದಷ್ಟು ನಾವು ಜನರಿಗೆ ಸಹಾಯ ಮಾಡುವುದಾಗಿ ಹೇಳಿದರು. ಉಳ್ಳಾಲದಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸ್ಮಶಾನವೊಂದು ಧರಾಶಾಹಿಯಾಗಿದೆ. 

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...