ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ; ರಸ್ತೆಯಲ್ಲೇ ಪಲ್ಟಿಯಾದ ಕಾರು..!
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಹುಂಡೈ ಕ್ರೇಟಾ ಕಾರೊಂದು ಸೆಲೆರಿಯೋ ಕಾರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಕಟಪಾಡಿ ಸಮೀಪ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸೆಲೆರಿಯೋ ಕಾರು ಪಲ್ಟಿಯಾಗಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.