Connect with us

DAKSHINA KANNADA

ತಾಯಿ-ಮಗು ಸಾವು: ವೈದ್ಯರ ನಿರ್ಲಕ್ಷ್ಯ ಎಂದು ಮನೆಮಂದಿ ಆರೋಪ

Published

on

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ಆಗಮಿಸಿದ ತಾಯಿ ಮತ್ತು ಮಗು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ಉಂಟಾದ ಸಾವು ಎಂದು ಮನೆ ಮಂದಿ ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆ ಪತಿ ಗಣೇಶ ಎಂಬವರು ಪಾಂಡೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ವಿಟ್ಲ ಮೂಲದ ಸವಿತಾ (33)ರನ್ನು ಎರಡನೇ ಹೆರಿಗೆಗಾಗಿ ನಿನ್ನೆ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆ ತರಲಾಗಿತ್ತು.

ಆದರೆ ದಾಖಲಿಸಿದ ವೈದ್ಯರು ಮಗು ಅದಾಗಲೇ ಹೊಟ್ಟೆಯಲ್ಲಿ ಸಾವನ್ನಪ್ಪಿದೆ ಎಂದು ಹೇಳಿದ್ದರು.. ಬಳಿಕ ಮಗುವನ್ನು ಹೊರತೆಗೆದು ತಾಯಿಯನ್ನು ಉಳಿಸಿಕೊಡುವುದಾಗಿ ಮಾತು ನೀಡಿದ್ದರು. ಆದರೆ ಸಂಜೆ ವೇಳೆಗೆ ತಾಯಿ ಸವಿತಾ ಕೂಡಾ ಸಾವನ್ನಪ್ಪಿದ್ದಾಳೆ ಎಂದು ನಮಗೆ ತಿಳಿಸಿದ್ದಾರೆ.

ಇದು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಉಂಟಾದ ಸಾವು ಎಂದು ಮೃತ ಮಹಿಳೆ ಸವಿತಾ ಪತಿ ಗಣೇಶ್‌ ಹಾಗೂ ಅಣ್ಣ, ಅತ್ತಿಗೆ ದೂರಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆತಂಕಗೊಂಡ ಮನೆಮಂದಿ ಆಸ್ಪತ್ರೆಯ ಪರಿಸರದಲ್ಲಿ ಸೇರಿ ನ್ಯಾಯಕ್ಕಾಗಿ ಆಗ್ರಹಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಬಳಿಕ ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಅವರು ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ದೂರಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಮನೆ ಮಂದಿ ಜೊತೆಗೂ ಚರ್ಚಿಸಿ ಅವರಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending