LATEST NEWS
ಬಾರ್ ತೆರೆದ ಖುಷಿಯಲ್ಲಿ ಬಾಟಲಿಗೆ ಆರತಿ ಎತ್ತಿ, ಚುಂಬಿಸಿದ
ಚೆನ್ನೈ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ತಮಿಳುನಾಡು ರಾಜ್ಯದಲ್ಲಿ ಹೇರಲಾಗಿದ್ದ ಲಾಕ್ಡೌನ್ ಜೂನ್ 21ರತನಕ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ನಿಗದಿತ ಅವಧಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಸಿಕ್ಕ ಖುಷಿಯಲ್ಲಿ ಮದ್ಯಪ್ರಿಯನೋರ್ವ ಬಾಟಲಿಗೆ ಚುಂಬಿಸಿ, ಆರತಿ ಎತ್ತಿ ನಮಸ್ಕರಿಸಿದ ವೀಡಿಯೋ ಆಗಿದೆ.
ರಾಜ್ಯದಲ್ಲಿ ಕೆಲವೊಂದಷ್ಟು ನಿಯಮಾವಳಿಗಳನ್ನು ಸಡಿಲಿಸಲಾಗಿದ್ದು, 27 ಜಿಲ್ಲೆಗಳಲ್ಲಿ ಮದ್ಯಪ್ರಿಯರಿಗಾಗಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಬಾರ್, ವೈನ್ ಶಾಪ್ಗಳನ್ನು (TASMAC) ನಿಗದಿತ ಅವಧಿಯಲ್ಲಿ ತೆರೆಯಲು ಮುಖ್ಯಮಂತ್ರಿ ಸ್ಟಾಲಿನ್ ಸಮ್ಮತಿ ಸೂಚಿಸಿದ್ದಾರೆ. ಇದಕ್ಕಾಗಿ ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆಯಾದರೂ ಮದ್ಯಪ್ರಿಯರು ಮಾತ್ರ ಸಂತುಷ್ಟಗೊಂಡಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ವಿಡಿಯೋವೊಂದು ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬ ಮದ್ಯದ ಬಾಟಲಿಗೆ ಚುಂಬಿಸಿ, ನಂತರ ಆರತಿ ಬೆಳಗಿ ನಮಸ್ಕರಿಸಿ ಪೂಜೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯು ತಮಿಳುನಾಡಿನ ಮದುರೈ ಪಟ್ಟಣದಲ್ಲಿ ನಡೆದಿದೆ ಎನ್ನಲಾಗಿದ್ದು, ಮದ್ಯದ ಮಳಿಗೆ ತೆರೆದಿರುವುದನ್ನು ಕಂಡು ಸಂತಸಗೊಂಡ ವ್ಯಕ್ತಿ ತನ್ನ ಖುಷಿಯನ್ನು ಹೀಗೆ ವ್ಯಕ್ತಪಡಿಸಿದ್ದಾನೆ. ಮೊದಲಿಗೆ ಆರತಿಯೊಂದನ್ನು ಹಚ್ಚಿ ಅಂಗಡಿ ಮುಂದಿಟ್ಟ ಆತ, ಮದ್ಯ ಖರೀದಿಸಿ ಬಾಟಲಿಗಳಿಗೆ ಮುತ್ತು ಕೊಟ್ಟಿದ್ದಾನೆ. ಆಮೇಲೆ, ಅವುಗಳನ್ನು ಅಲ್ಲಿಯೇ ಮದ್ಯದಂಗಡಿ ಮುಂದೆ ಇಟ್ಟು ಶ್ರದ್ಧಾಪೂರ್ವಕವಾಗಿ ನಮಸ್ಕರಿಸಿ, ದೇವರನ್ನು ಆರಾಧಿಸುವಂತೆಯೇ ಆರಾಧಿಸಿದ್ದಾನೆ.
ಆತ ಮದ್ಯದ ಬಾಟಲಿಗಳಿಗೆ ಆರತಿ ಬೆಳಗಿ ಪೂಜಿಸುವುದನ್ನು ನೋಡಿ ಇನ್ನೋರ್ವ ವ್ಯಕ್ತಿಯೂ ನಡುವಲ್ಲಿ ಬಂದು ತಾನು ಖರೀದಿಸಿದ ಬಾಟಲಿಯನ್ನು ಪಕ್ಕಕ್ಕಿಟ್ಟು ನಮಸ್ಕರಿಸಿ ತೆರಳಿದ್ದಾನೆ. ಈ ವ್ಯಕ್ತಿ ಮಾತ್ರ ಅದ್ಯಾವುದರ ಪರಿವೇ ಇಲ್ಲವೆಂಬಂತೆ ಎರಡೂ ಕೈಗಳಿಂದ ಬಾಟಲಿಗಳನ್ನು ಎತ್ತಿ ಹಿಡಿದು, ನೆರೆದವರಿಗೆಲ್ಲರಿಗೂ ತೋರಿಸಿ ಬಳಿಕ ಕೆಳಗಿಟ್ಟು, ನಾಲ್ಕೈದು ಬಾರಿ ನಮಸ್ಕಾರ ಮಾಡಿದ್ದಾನೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!