ಬೆಂಗಳೂರು: ರಾಜ್ಯದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲೇ ಇದೀಗ ಹೊಟೇಲ್ ಸೇರಿದಂತೆ ಉಪಾಹಾರ ಮಂದಿರಗಳಲ್ಲಿ ತಿನಿಸಿನ ಬೆಲೆ ಹೆಚ್ಚಿಸಲು ಮಾಲೀಕರು ನಿರ್ಧರಿಸಿದ್ದಾರೆ.
ನಾಳೆಯಿಂದಲೇ ಹೊಟೇಲ್ ಉಪಾಹಾರ ಮತ್ತಷ್ಟು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಅಡುಗೆಗೆ ಬಳಕೆಯಾಗುವ ಖಾದ್ಯತೈಲ, ವಾಣಿಜ್ಯ ಬಳಕೆಯ ನೈಸರ್ಗಿಕ ಅನಿಲ ಸಿಲಂಡರ್ನ ಬೆಲೆ ಹೆಚ್ಚಾಗಿದೆ.
ಇದರ ಜೊತೆಗೆ ಪೆಟ್ರೋಲ್-ಡೀಸೆಲ್ ಧಾರಣೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಬೆಲೆ ಏರಿಕೆ ಸರಿದೂಗಿಸಲು ಆಹಾರದ ದರ ಹೆಚ್ಚಳಕ್ಕೆ ಹೋಟೆಲ್ಗಳ ಮಾಲೀಕರು ಗಂಭೀರ ಚಿಂತನೆ ನಡೆಸಿದ್ದಾರೆ.
ಊಟ, ತಿಂಡಿ, ಕಾಫೀ, ಟೀ, ಜಾಟ್ಸ್ ಸೇರಿದಂತೆ ಎಲ್ಲ ಬಗೆಯ ತಿನಿಸು ಮತ್ತು ಪಾನೀಯಗಳ ದರ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.