Connect with us

DAKSHINA KANNADA

ಸುಳ್ಯದಲ್ಲಿ ಮಾರಕಾಸ್ತ್ರ ಹಿಡಿದು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನ-ನಗದು ದರೋಡೆ

Published

on

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಮೀಪ ತಂಡವೊಂದು ಮಾರಕಾಸ್ತ್ರಗಳನ್ನು ಹಿಡಿದು ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.


ಮಾರಕಾಸ್ತ್ರಗಳನ್ನು ಹಿಡಿದುಕೊಂಡ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಅವರ ಅಂಬಾಶ್ರಮ ಮನೆಗೆ ನುಗ್ಗಿ ಅತ್ತೆ ಹಾಗೂ ಸೊಸೆಯನ್ನು ಮಚ್ಚು ಹಿಡಿದು ಬೆದರಿಸಿ 100 ಗ್ರಾಂ. ಚಿನ್ನ ಹಾಗೂ 1.50 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಅಂಬರೀಶ್ ಭಟ್ ಸಂಪಾಜೆಯ ಜನರಿಗೆ ಹೆಚ್ಚು ಚಿರಪರಿಚಿತ. ದೇವರ ಪೂಜಾ ಕಾರ್ಯ, ಜ್ಯೋತಿಷ್ಯ ಶಾಸ್ತ್ರದಲ್ಲಿ ಅವರ ಕುಟುಂಬ ವಂಶಪಾರಂಪರ್ಯದಿಂದಲೇ ಬಹಳಷ್ಟು ಹೆಸರನ್ನು ಗಳಿಸಿದೆ.

ಅಂಬರೀಶ್ ಭಟ್ ಕೂಡ ಸಮಾಜದಲ್ಲಿ ತಮ್ಮ ಧಾರ್ಮಿಕ ಕಾರ್ಯಗಳಿಂದ ಗುರುತಿಸಿಕೊಂಡವರು. ಅವರ ಇಬ್ಬರು ಪುತ್ರರು ಶ್ರೀವತ್ಸ ಹಾಗೂ ಶ್ರೀನಿಧಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗದಲ್ಲಿದ್ದಾರೆ. ಇತ್ತೀಚೆಗಷ್ಟೇ ಶ್ರೀವತ್ಸ ತಮ್ಮ ಪತ್ನಿ, ಇಬ್ಬರು ಅವಳಿ ಮಕ್ಕಳೊಂದಿಗೆ ಊರಿಗೆ ಬಂದಿದ್ದರು.


ಕಳ್ಳತನ ನಡೆದ ನಿನ್ನೆಯ ದಿನ ಶ್ರೀವತ್ಸ ಹಾಗೂ ಅಂಬರೀಶ್ ಭಟ್ ಅವರು ಮನೆಯಲ್ಲಿ ಇರಲಿಲ್ಲ. ಈ ವೇಳೆ ಕಳ್ಳರ ಗುಂಪೊಂದು ಮನೆಗೆ ನುಗ್ಗಿದೆ. ಮೊದಲು ಬಂದವರೇ ಶ್ರೀವತ್ಸ ಅವರ ಪತ್ನಿಯ ತಾಳಿ ಸರವನ್ನು ಕಿತ್ತುಕೊಂಡಿದ್ದಾರೆ.

ಆಗ ತಾನೆ ತೊಟ್ಟಿಲಲ್ಲಿ ಮಲಗಿದ್ದ ಅವಳಿ ಮಕ್ಕಳಿಗೆ ಏನೂ ಮಾಡಬೇಡಿ ಎಂದು ಮನೆಯವರು ಗೋಗರೆದಿದ್ದಾರೆ. ಎಳನೀರು ಕಡಿಯವ ಮಚ್ಚು ಹಿಡಿದಿದ್ದ ದರೋಡೆಕೋರರು ಮನೆಯ ಬೀರುವಿನ ಕೀಲಿ ಕೈ ನೀಡುವಂತೆ ಹೇಳಿದ್ದಾರೆ.

ಜೀವ ಭಯದಿಂದ ಮಹಿಳೆಯರು ಕೀ ನೀಡಿದ್ದಾರೆ. ಅದರಲ್ಲಿದ್ದ ಚಿನ್ನ ಹಾಗೂ ನಗದನ್ನು ದೋಚಿ ಕತ್ತಲಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ದರೋಡೆ ಪ್ರಕರಣದಲ್ಲಿ ಅತ್ಯಂತ ದೊಡ್ಡ ಪ್ರಕರಣ ಇದಾಗಿದೆ.

ಈ ಬಗ್ಗೆ ಮಂಗಳೂರಿನಿಂದ ಉನ್ನತ ಮಟ್ಟದ ಪೊಲೀಸ್ ತಂಡ ಈಗಾಗಲೇ ಅಂಬಾಶ್ರಮಕ್ಕೆ ಬಂದು ತನಿಖೆ ಕೈಗೊಂಡಿದೆ. ಶ್ವಾನ ದಳ, ಬೆರಳಚ್ಚು ತಂಡಗಳು ಈಗಾಗಲೇ ತನಿಖೆ ನಡೆಸಿದ್ದು,

ಇದೀಗ ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ದರೋಡೆ ಪ್ರಕರಣ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!

Published

on

ಮಂಗಳೂರು:  ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು  ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್‌ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ.  ಇನ್ನು ಕಿಲಾಡಿ ಪ್ಲೇಯರ್‌ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

comedy kiladi

ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.

ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?

ಪುತ್ತೂರಿನ ಪವಿತ್ರ ಹೆಗ್ಡೆ  ಆಯ್ಕೆ:

ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್‌ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್‌ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್‌ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖ‌ರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.

ವೈರಲ್ ಸ್ಟಾರ್ ಗಣರಾಜ್ ಭಂಡಾರಿ:

ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್‌ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.  ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.

 

Continue Reading

DAKSHINA KANNADA

ದೇವರಿಗೆ ತುಪ್ಪದಲ್ಲಿ ದೀಪ ಹಚ್ಚುವುದು ಶುಭವೇ..?

Published

on

ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ. ತುಪ್ಪದ ದೀಪವನ್ನು ಹಚ್ಚುವುದು ದುಬಾರಿಯಾದ ಕಾರಣ ಜನರು ಎಣ್ಣೆಯ ದೀಪಗಳನ್ನು ಹೆಚ್ಚು ಹಚ್ಚುತ್ತಾರೆ. ಎಣ್ಣೆ ಅಥವಾ ತುಪ್ಪದ ದೀಪಕ್ಕಿಂತ ಯಾವುದರ ದೀಪ ಹಚ್ಚುವುದು ಹೆಚ್ಚು ಮಂಗಳಕರ ಎಂಬುದನ್ನು ತಿಳಿದುಕೊಳ್ಳೋಣ.

ಯಾವ ದೀಪವನ್ನು ಬೆಳಗಬೇಕು?

ತುಪ್ಪದ ದೀಪವನ್ನು ಯಾವಾಗಲೂ ಹೂವಿನಾಕಾರದ ದೀಪದಲ್ಲಿ ಬಿಳಿ ಎಂಬ ಬೆಳಕಿನಿಂದ ಬೆಳಗಿಸಲಾಗುತ್ತದೆ ಮತ್ತು ಎಣ್ಣೆ ದೀಪವನ್ನು ಉದ್ದವಾದ ದೀಪದಿಂದ ಬೆಳಗಿಸಲಾಗುತ್ತದೆ. ಆದರೆ, ಎಳ್ಳಿನ ಎಣ್ಣೆಯ ದೀಪವನ್ನು ಹಚ್ಚಿದರೆ ಅದರಲ್ಲಿ ಕೆಂಪು ಅಥವಾ ಹಳದಿ ದೀಪವನ್ನು ಬಳಸಬೇಕು.

ಯಾವ ದೀಪ ಸೂಕ್ತ?

ತುಪ್ಪದ ದೀಪವನ್ನು ದೇವರಿಗೆ ಸಮರ್ಪಿಸಲಾಗುತ್ತದೆ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸಲಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಹೊಂದಲು ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇವರುಗಳು ಮತ್ತು ದೇವತೆಗಳು ಸಂತೋಷಪಡುತ್ತಾರೆ.

ತುಪ್ಪದ ದೀಪವನ್ನು ಹಚ್ಚುವುದು ಅತ್ಯಂತ ಮಂಗಳಕರ

ಮನೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಇದು ಎಲ್ಲಾ ರೀತಿಯ ನೋವನ್ನು ನಾಶಪಡಿಸುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂದು ಹೇಳಲಾಗಿದೆ.

ತುಪ್ಪದ ದೀಪವನ್ನು ಹಚ್ಚಿದರೆ ಗಾಳಿಯು ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳು ನಾಶವಾಗುತ್ತದೆ. ಇದರ ಸುವಾಸನೆಯು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ತುಪ್ಪವು ಚರ್ಮದ ರಕ್ತ ಕಣಗಳನ್ನು ಸಕ್ರಿಯಗೊಳಿಸುವ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ, ಇದರಿಂದಾಗಿ ಯಾವುದೇ ಚರ್ಮ ರೋಗಗಳು ಬರುವುದಿಲ್ಲ.

Continue Reading

LATEST NEWS

Trending