BANTWAL
ಮನೆ ಗೋಡೆ ಕುಸಿದು ಮಹಿಳೆಗೆ ಗಂಭೀರ ಗಾಯ -ಶಾಸಕ ರಾಜೇಶ್ ನಾಯ್ಕ್ ಆಸ್ಪತ್ರೆಗೆ ಭೇಟಿ
ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬಂಟ್ವಾಳ: ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ಸಫಾಳ ತಾಯಿ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಅಧಿಕಾರಿಗಳ ಜೊತೆ ಚರ್ಚಿಸಿ ಈ ದುರ್ಘಟನೆ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.
ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು
ಘಟನೆ ನಡೆದ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.
ಜು. 7ರಂದು ಸಜೀಪ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ಗುಂಪು ಮನೆಯೊಂದಕ್ಕೆ ಬೆಳಿಗ್ಗೆ ಸುಮಾರು 5.30 ರ ವೇಳೆ ಗುಡ್ಡ ಜರಿದು ಮಹಮ್ಮದ್ ನಂದಾವರ ಅವರ ಪತ್ನಿ ಹಾಗೂ ಮಗಳು ಸಫಾ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು.
ನಿರಂರತವಾಗಿ ಸುರಿಯುವ ಮಳೆ ನಡುವೆಯೂ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ಕಾರ್ಯಚರಣೆಯಿಂದ ಸಫಾರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು.
ಈಕೆ ತಾಯಿ ಝರಿನಾ ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಹಿತ ತಾಲೂಕಿನ ಅಧಿಕಾರಿಗಳು ಭೇಟಿ ನೀಡಿದ್ದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM7 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM7 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM6 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?