Monday, January 24, 2022

ಕಾರ್ಕಳ: ಬಟ್ಟೆ ಒಣಗಿಸುತ್ತಿದ್ದ ಮಹಿಳೆ 5ನೇ ಅಂತಸ್ತಿನಿಂದ ಬಿದ್ದು ಸಾವು

ಕಾರ್ಕಳ: ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಿದ್ದ ಮಹಿಳೆಯೊಬ್ಬರು ಐದನೇ ಅಂತಸ್ತಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಿಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಕಮಲ ಪ್ರಿಯಾ ಬಿ.(48) ಎಂದು ಗುರುತಿಸಲಾಗಿದೆ.

ಇವರು ನ.24ರಂದು ಸಂಜೆ ವೇಳೆ ವಸತಿ ಗೃಹದ 5ನೇ ಮಹಡಿಯಲ್ಲಿದ್ದ ಮನೆಯ ಬಾಲ್ಕನಿಯಲ್ಲಿ ಸ್ಟೂಲ್ ಮೇಲೆ ನಿಂತು ಬಟ್ಟೆ ಒಣಗಿಸುತ್ತಿದ್ದರು.
ಈ ವೇಳೆ ಇವರು ಆಕಸ್ಮಿಕವಾಗಿ ಆಯ ತಪ್ಪಿ ಕೆಳಕ್ಕೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ನ.26ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...