Friday, June 2, 2023

ಗಂಡ ತನ್ನೊಂದಿಗೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ನೇಣಿಗೆ ಶರಣಾದ ಗೃಹಿಣಿ..!

ಗಂಡ ತನ್ನೊಂದಿಗೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ನೇಣಿಗೆ ಶರಣಾದ ಗೃಹಿಣಿ..!

ಕಾರವಾರ : ತನ್ನ ಗಂಡ ತನ್ನೊಂದಿಗೆ ಹೆಚ್ಚು ಸಮಯ ಕಳೆಯುವುದಿಲ್ಲ ಹಾಗೂ ಮಾತನಾಡುವುದಿಲ್ಲ ಎಂದು ಮನನೊಂದ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸಂಭವಿಸಿದೆ.

ತಾಲೂಕಿನ ಗಿಡಮಾವಿನಕಟ್ಟೆಯಲ್ಲಿ ನಡೆದಿದೆ. ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ.

ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪಲ್ಲವಿ, ಕಳೆದ ಎರಡು ವರ್ಷಗಳಿಂದ ಗಂಡನ ಜತೆ ನಗರದ ಇಂದಿರಾನಗರದಲ್ಲಿ ವಾಸವಾಗಿದ್ದಳು.

ಇದೀಗ ತಮ್ಮ ಪುಟ್ಟ ಮಗುವನ್ನು ಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಲೆಮನೆ ಹಬ್ಬಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದಿದ್ದ ಪತಿ ಮನೆಗೆ ಬಾರದ ಹಿನ್ನೆಲೆ ಕೋಪಗೊಂಡ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ನೆರಹೊರೆಯವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics