ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಇಂದು ತನಿಖೆ ನಡೆಸಿತು. ಮಹತ್ವದ ವಿಚಾರಣೆ ನಡೆಸಿದ ಕೋರ್ಟ್, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮುಂದಿನ 24 ಗಂಟೆಯಲ್ಲಿ ವರದಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶ ನೀಡಿದೆ.
ಅಕ್ಟೋಬರ್ ಮೂರರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.
ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ ಎಂದು ಇಬ್ಬರು ಹಿರಿಯ ವಕೀಲರು ಪತ್ರ ಬರೆದಿದ್ದರು.
ಚೀಫ್ ಜಸ್ಟೀಸ್ ಎನ್ವಿ ರಮಣ ನೇತೃತ್ವದ ನ್ಯಾಯಪೀಠವು ಈ ಅರ್ಜಿಯನ್ನ ಸ್ವೀಕರಿಸಿತ್ತು. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೂಳಗೊಂಡ ಪೀಠ ಇಂದು ವಿಚಾರಣೆ ನಡೆಸಿತು.
ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನದ ಬಗ್ಗೆಯೂ ವಿವರ ನೀಡುಬೇಕು. ಈ ಪ್ರಕರಣ ಅತ್ಯಂತ ದುರಾದೃಷ್ಟಕರ,
ಅನಾರೋಗ್ಯ ಸ್ಥಿತಿಯಲ್ಲಿರುವ ಮೃತರ ತಾಯಿಗೆ ಈ ಕೂಡಲೇ ವೈದ್ಯಕೀಯ ಚಿಕಿತ್ಸೆಯನ್ನ ಕೊಡಿಸಬೇಕು ಎಂದು ಸುಪ್ರೀಂಕೋರ್ಟ್ ಇದೇ ವೇಳೆ ಸೂಚಿಸಿ, ಹೆಚ್ಚಿನ ವಿಚಾರಣೆಯನ್ನ ನಾಳೆಗೆ ಮುಂದೂಡಿದೆ.