Connect with us

LATEST NEWS

Hubballi: ನೈರುತ್ಯ ರೈಲ್ವೆ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Published

on

ಹುಬ್ಬಳ್ಳಿ ವಲಯದ ಕೇಂದ್ರ ಕಚೇರಿಯಲ್ಲಿ ಆ.15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರು, ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಹುಬ್ಬಳ್ಳಿ: ಹುಬ್ಬಳ್ಳಿ ವಲಯದ ಕೇಂದ್ರ ಕಚೇರಿಯಲ್ಲಿ ಆ.15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರು, ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ನೈರುತ್ಯ ರೈಲ್ವೆಯು ಈ ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದರು.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಮಾತನಾಡಿ, ಮೂಲಸೌಕರ್ಯ ಮತ್ತು ಸಂಪರ್ಕ ಅಭಿವೃದ್ಧಿಯಲ್ಲಿ ನೈರುತ್ಯ ರೈಲ್ವೆ ಅಸಾಧಾರಣ ಬೆಳವಣಿಗೆ ಹಾಗೂ ರೈಲು ಕಾರ್ಯಾಚರಣೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ.

ಕಳೆದ ಮೂರು ಹಣಕಾಸು ವರ್ಷಗಳಲ್ಲಿ ನೈರುತ್ಯ ರೈಲ್ವೆಯು ಪ್ರತಿ ವರ್ಷ 200 ಕಿ. ಮೀ. ಗಿಂತ ಹೆಚ್ಚು ಹೊಸ ಮಾರ್ಗ ಮತ್ತು ಜೋಡಿ ಮಾರ್ಗಗಳನ್ನು ಮಾಡಲಾಗಿದೆ ಎಂದು  ಹೇಳಿದರು.

2022-23ರ ಆರ್ಥಿಕ ವರ್ಷದಲ್ಲಿ 46.7 ಮಿಲಿಯನ್ ಟನ್‌ ಮೂಲ ಸರಕು ಲೋಡಿಂಗ್ ಮಾಡಿದ್ದು, ಇದು ಇದುವರೆಗೆ ಅತ್ಯಧಿಕ ಲೋಡಿಂಗ್‌ ಆಗಿದೆ.

ಒಟ್ಟು 8,071 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದು ನೈರುತ್ಯ ರೈಲ್ವೆ ಪ್ರಾರಂಭವಾದಾಗಿನಿಂದ ಇದುವರೆಗಿನ ಅತಿ ಹೆಚ್ಚು ಆದಾಯವಾಗಿದೆ.

2022-23ರ ಆರ್ಥಿಕ ವರ್ಷದಲ್ಲಿ 874 ಕಿ.ಮೀ ಟ್ರ್ಯಾಕ್‌ಗಳನ್ನು ವಿದ್ಯುದ್ದೀಕರಿಸಲಾಗಿದೆ.

ಇದು ಒಂದೇ ವರ್ಷದಲ್ಲಿ ನೈರುತ್ಯ ರೈಲ್ವೆ ವಲಯದಲ್ಲಿ ಅತೀ ಹೆಚ್ಚು ವಿದ್ಯುದ್ದೀಕರಣ ದಾಖಲೆಯಾಗಿದೆ.

2022-23ರಲ್ಲಿ ಪ್ರಮುಖ ಕಾರ್ಯಕ್ಷಮತೆ ಸೂಚ್ಯಂಕಗಳಲ್ಲಿ (ಕೆಪಿಐ) ಎಲ್ಲಾ ರೈಲ್ವೆ ವಲಯಗಳ ಪೈಕಿ ನೈರುತ್ಯ ರೈಲ್ವೆ ವಲಯವು ಮೊದಲ ಸ್ಥಾನವನ್ನು ಗಳಿಸಿದೆ.

‘ಸ್ವಚ್ಛತಾ ಪಖ್ವಾಡ-2022′ ರ ಸಂದರ್ಭದಲ್ಲಿ ನೈರುತ್ಯ ರೈಲ್ವೆ ವಲಯದ್ಯಾದಂತ ಕೈಗೊಂಡ ಹಲವಾರು ಉಪಕ್ರಮಗಳನ್ನು ಗುರುತಿಸಿ ರೈಲ್ವೆ ಸಚಿವಾಲಯವು ನೈರುತ್ಯ ರೈಲ್ವೆಯನ್ನು ಅತ್ಯುತ್ತಮ ಕಾರ್ಯಕ್ಷಮತೆಯ ರೈಲ್ವೆ ವಲಯ ಎಂದು ಗುರುತಿಸಿದೆ ಎಂದರು.

2023ರ ಜನವರಿಯಿಂದ ಜೂನ್ ವರೆಗೆ 56 ರೈಲುಗಳಲ್ಲಿ ಎಚ್‌ಒಜಿ ವ್ಯವಸ್ಥೆಯನ್ನು ಅಳವಡಿಸಿದ್ದರಿಂದ 42 ಕೋಟಿ ರೂ.ಗಳ ಮೌಲ್ಯದ 53 ಲಕ್ಷ ಲೀಟರ್ ಎಚ್.ಎಸ್.ಡಿ ಇಂಧನವು ಉಳಿತಾಯವಾಗಿದೆ ಎಂದು ಹೇಳಿದರು.

ನೈರುತ್ಯ ರೈಲ್ವೆಯ ಎಲ್ಲಾ ಅಧಿಕಾರಿಗಳು, ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳಿಗೆ ಅವರ ಸಮರ್ಪಿತ ಕಾರ್ಯಕ್ಕಾಗಿ ಅಭಿನಂಧನೆ, ನೈರುತ್ಯ ರೈಲ್ವೆಯನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯಲು ಬೆಂಬಲ ನೀಡಿದ ಮಾನ್ಯತೆ ಪಡೆದ ಒಕ್ಕೂಟಗಳು ಮತ್ತು ಸಂಘಗಳಿಗೆ ಹಾಗೂ ನೈರುತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳಿಗೆ ಪ್ರಧಾನ ವ್ಯವಸ್ಥಾಪಕರು ಕೃತಜ್ಞತೆ ಸಲ್ಲಿಸಿದರು.

ತದನಂತರ SWRWWO ಸಂಸ್ಥೆ ಪ್ರೌಢಶಾಲೆಯ ಮಕ್ಕಳಿಂದ ವಿವಿಧ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಯು.ಸುಬ್ಬರಾವ್, ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹುಬ್ಬಳ್ಳಿಯ ರೈಲ್ವೆ ಆಸ್ಪತ್ರೆಗೆ ನೈರುತ್ಯ ರೈಲ್ವೆಯ ಮಹಿಳಾ ಕಲ್ಯಾಣ ಸಂಸ್ಥೆಯ(SWRWWO) ಅಧ್ಯಕ್ಷರಾದ ಡಾ. ವಂದನಾ ಶ್ರೀವಾಸ್ತವ ಅವರ ನೇತೃತ್ವದಲ್ಲಿ ಭೇಟಿ ನೀಡಿ, ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಿದರು.

ತದನಂತರ ಆಸ್ಪತ್ರೆಗೆ ಎರಡು ಶುದ್ದ ನೀರಿನ ಘಟಕ(RO-UV ವಾಟರ್ ಪ್ಯೂರಿಫೈಯರ್), ರೀಚಾರ್ಜ್ ಮಾಡುವ ಬ್ಯಾಟರಿ, ಡಿಜಿಟಲ್ ತೂಕದ ಯಂತ್ರಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.

ಹುಬ್ಬಳ್ಳಿಯ SWRWWO ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 44 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾದ ಅನೆಕ್ಸ್ ಕಟ್ಟಡ ಉದ್ಘಾಟಿಸಿದರು.

ಈ ಕಟ್ಟಡದಲ್ಲಿ ನೂತನ ಪ್ರಾಂಶುಪಾಲರ ಕೊಠಡಿ, ವಿಜ್ಞಾನ ಪ್ರಯೋಗಾಲಯ ಹಾಗೂ ಹೆಚ್ಚುವರಿ ಕ್ಲಾಸ್ ರೂಮ್ ಇದ್ದು ಮಕ್ಕಳ ಶಿಕ್ಷಣದ ಗುಣಮಟ್ಟ ಸುಧಾರಿಸಲು ಪೂರಕವಾಗಲಿದೆ.

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜೀವ್ ಕಿಶೋರ್ ಹಾಗೂ ವಿವಿಧ ವಿಭಾಗದ ಪ್ರಧಾನ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ನೈರುತ್ಯ ರೈಲ್ವೆ, ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪತ್ರಿಕಾ ಪ್ರಕಟನೆಗೆ ತಿಳಿಸಿದರು.

DAKSHINA KANNADA

ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್‌- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌

Published

on

ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್‌ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.

ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.

ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.

ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.

ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್‌ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.

Continue Reading

LATEST NEWS

Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!

Published

on

ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ವರದಿಯಾಗಿದೆ.

ಮೊರಾದಾಬಾದ್‌ ನಿವಾಸಿ ಅಲ್ಕಾ ಪಠಾಕ್‌ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಶಿಯಾನಾದ ಬ್ಯಾಂಕ್‌ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.

ಇತ್ತೀಚಿಗೆ ಬ್ಯಾಂಕ್‌ ಸಿಬಂದಿ ಲಾಕರ್‌ ಅಗ್ರಿಮೆಂಟ್‌ ರಿನೀವಲ್‌ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.

ಈ ವೇಳೆ ಲಾಕರ್‌ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.

ಈ ಬಗ್ಗೆ ಬ್ಯಾಂಕ್‌ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.

ತನಗಾದ  ನಷ್ಟಕ್ಕೆ ಬ್ಯಾಂಕ್‌ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.

Continue Reading

FILM

ವಯಸ್ಸಲ್ಲಿ ರಾಘವ್ ಚಡ್ಡಾ ಅವರಿಗಿಂತ ಸೀನಿಯರ್ ಪರಿಣಿತಿ ಚೋಪ್ರಾ…!

Published

on

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದೆ.

 

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದ್ದು, ರಾಘವ್ ಚಡ್ಡಾ ಅವರಿಗಿಂತ ಪರಿಣಿತಿ ಚೋಪ್ರಾ ಸೀನಿಯರ್.

ಸೆಪ್ಟೆಂಬರ್​ 24ರಂದು ಈ ಜೋಡಿ ಗ್ರ್ಯಾಂಡ್ ಆಗಿ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಸಪ್ತಪದಿ ತುಳಿದಿದ್ರು.

ರಾಘವ್ ಚಡ್ಡಾ ಅವರು 2022ರಲ್ಲಿ ಪಂಜಾಬ್‌ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.

33ನೇ ವಯಸ್ಸಿಗೆ ರಾಜ್ಯಸಭೆ ಪ್ರವೇಶಿಸಿದ ಅವರು, ಅತ್ಯಂತ ಕಿರಿಯ ರಾಜ್ಯಸಭಾ ಸದಸ್ಯ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.

ಇನ್ನು ನಟಿ ಪರಿಣಿತಿ ಚೋಪ್ರಾ ಅವರು 2011ರಿಂದಲೂ ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ.

‘ಶುದ್ಧ್ ದೇಸಿ ರೊಮ್ಯಾನ್ಸ್’, ‘ಹಸೀ ತೊ ಫಸೀ’, ‘ದಾವತ್ ಎ ಇಶ್ಕ್’, ‘ನಮಸ್ತೆ ಇಂಗ್ಲೆಂಡ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸದ್ಯ ಅಕ್ಷಯ್ ಕುಮಾರ್ ಜತೆ ಪರಿಣಿತಿ ನಟಿಸಿರುವ ‘ಮಿಷನ್ ರಾಣಿಗಂಜ್’ ಸಿನಿಮಾ ತೆರೆ ಕಾಣಬೇಕಿದೆ.

ಸದ್ಯಕ್ಕೆ ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರದ ಸಾಕಷ್ಟು ಬಗ್ಗೆ ಚರ್ಚೆಯಾಗುತ್ತಿದೆ.

ಇಬ್ಬರಿಗೂ ಈಗ 35 ವರ್ಷ ವಯಸ್ಸಾಗಿದ್ದು, ನಟಿ ಪರಿಣಿತಿ ಚೋಪ್ರಾ ಅವರು 22 ಅಕ್ಟೋಬರ್​​ 1988ರಲ್ಲಿ ಜನಿಸಿದ್ದಾರೆ. ರಾಘವ್‌ ಚಡ್ಡಾ ಅವರು 11 ನವೆಂಬರ್​ 1988ರಲ್ಲಿ ಜನಿಸಿದ್ದಾರೆ.

ವಿಶೇಷ ಎಂದರೆ ನಟಿ ಪರಿಣಿತಿ ಚೋಪ್ರಾ ಅವರು ರಾಘವ್‌ ಚಡ್ಡಾ ಅವರಿಗಿಂತ 20 ದಿನ ದೊಡ್ಡವರಾಗಿದ್ದಾರೆ.

ವಯಸ್ಸಿನ ಮಿತಿಯನ್ನು ಲೆಕ್ಕಿಸದೇ ಸ್ಟಾರ್​ ನಟ ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಮಾಮೂಲು ಆಗಿದೆ.

Continue Reading

LATEST NEWS

Trending