Connect with us

LATEST NEWS

Hubballi: ವಿದ್ಯುತ್ ಬಿಲ್ ನೌಕರನ ಕೊಲೆಗೆ ಯತ್ನ- ಆರೋಪಿ ಬಂಧನ..!

Published

on

ಹೆಸ್ಕಾಂ ನೌಕರನು ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸಂದರ್ಭ ಆತನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಹೆಸ್ಕಾಂ ನೌಕರನು ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸಂದರ್ಭ ಆತನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಬ್ದುಲ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಅಬ್ದುಲ್ ಕಳೆದ ಮೂರು ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದ್ದ.

ಹೀಗಾಗಿ ಈ ತಿಂಗಳ ಬಿಲ್ 5 ಸಾವಿರ ರೂ.ಗಿಂತ ಅಧಿಕ ಬಂದಿತ್ತು ಎನ್ನಲಾಗಿದೆ.

ಅಲ್ಲದೇ ವಿದ್ಯುತ್ ಬಳಕೆ 200 ಯೂನಿಟ್‍ಗಿಂತ ಹೆಚ್ಚು ಬಳಕೆ ಮಾಡಿದ್ದ ಹಿನ್ನೆಲೆ ಗೃಹ ಜ್ಯೋತಿ ಯೋಜನೆಯ ಉಪಯೋಗ ಪಡೆಯಲು ಸಾಧ್ಯವಾಗಿಲ್ಲ.

ಇದರಿಂದ ಕೋಪಗೊಂಡ ಅಬ್ದುಲ್ ಬಿಲ್ ನೀಡಲು ಹೋದ ಮಲ್ಲಯ್ಯ ಗಣಾಚಾರಿ ಎಂಬ ನೌಕರನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ, ಬಳಿಕ ಮನಬಂದಂತೆ ಥಳಿಸಿದ್ದಾನೆ.

ಬಳಿಕ ಸ್ಥಳೀಯರು ನೌಕರ ಮಲ್ಲಯ್ಯನನ್ನು ರಕ್ಷಣೆ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತೀವ್ರ ಗಾಯಗೊಂಡಿರುವ ಮಲ್ಲಯ್ಯನಿಗೆ ಚಿಕಿತ್ಸೆ ನೀಡಲಾಗಿದೆ.

ಈ ಕುರಿತು ಅಶೋಕನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending