Connect with us

LATEST NEWS

ಹುಬ್ಬಳ್ಳಿ: ಭಾರತೀಯ ರೈಲ್ವೆ ಸಚಿವಾಲಯದಿಂದ ‘ವೋಕಲ್‌ ಫಾರ್‌ ಲೋಕಲ್‌’ ಪ್ರಾರಂಭ

Published

on

ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಸಚಿವಾಲಯದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ‘ವೋಕಲ್‌ ಫಾರ್‌ ಲೋಕಲ್‌’ ಎಂಬ ದೃಷ್ಟಿಕೋನದಿಂದ ಪ್ರಾರಂಭಿಸಿದೆ ಎಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಸಚಿವಾಲಯದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ‘ವೋಕಲ್‌ ಫಾರ್‌ ಲೋಕಲ್‌’ ಎಂಬ ದೃಷ್ಟಿಕೋನದಿಂದ ಪ್ರಾರಂಭಿಸಿದೆ ಎಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

ಸ್ಥಳೀಯರೇ ತಯಾರಿಸಿದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಒದಗಿಸುವುದು ಮತ್ತು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಸ್ವಾವಲಂಬನೆಗೆ ಅವಕಾಶ ನೀಡುವ ಮೂಲಕ ಅವರನ್ನು ಉತ್ತೇಜಿಸುವಂತೆ ಮಾಡುವುದು.

ಈ ಯೋಜನೆಯಡಿ ಸ್ಥಳೀಯರಿಂದ ತಯಾರಿಸಿದ ಸ್ಥಳೀಯ ಉತ್ಪನ್ನಗಳ ಪ್ರದರ್ಶನ, ಮಾರಾಟ ಮತ್ತು ಹೆಚ್ಚಿನ ಪ್ರಚಾರವನ್ನು ನೀಡುವ ಉದ್ದೇಶದಿಂದ ಪ್ತಮುಖ ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ.

ಈ ಯೋಜನೆಗೆ ಮಾರ್ಚ್ 25, 2022 ರಂದು ಚಾಲನೆ ನೀಡಲಾಯಿತು.

ಪ್ರಸ್ತುತ ಮೇ 1 ಗೆ 728 ನಿಲ್ದಾಣ, 21 ರಾಜ್ಯ ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 785 ಸ್ಥಾಪಿಸುವ ಮೂಲಕ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಗಳನ್ನು ದೇಶಾದ್ಯಂತ ವಿಸ್ತರಿಸಲಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳ ಮತ್ತು ಉತ್ಪನ್ನಗಳ ಪ್ರದರ್ಶನಕ್ಕೆ ಅವಕಾಶವನ್ನು ನೀಡಲಾಗಿದೆ.

ರಾಷ್ಟ್ರದೆಲ್ಲಡೆ ಏಕರೂಪದ ಆಕರ್ಷಕವಾದ ವಿನ್ಯಾಸವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡಿಸೈನ್‌ ಅವರು ಮಾಡಿದ್ದಾರೆ.

– 21 ರಾಜ್ಯ, 3 ಕೇಂದ್ರಾಡಳಿತ ಪ್ರದೇಶ ಮತ್ತು 728 ರೈಲ್ವೆ ನಿಲ್ದಾಣಗಳು ಸೇರಿದಂತೆ ಒಟ್ಟು 785 ನಿಲ್ದಾಣಗಳಲ್ಲಿ ʻಒಂದು ನಿಲ್ದಾಣ-ಒಂದು ಉತ್ಪನ್ನʼದ ಯೋಜನೆಯಡಿ ಮಳಿಗೆಗಳನ್ನು ಸ್ಥಾಪಿಸಿದೆ.

– ಕರ್ನಾಟಕದ 21 ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ.

– ಈ ಮಳಿಗೆಗಳು- ಮಹಿಳಾ ಸಬಲೀಕರಣ ಉತ್ತೇಜಿಸುವ ಜೊತೆಗೆ ಸ್ಥಳೀಯ ಸ್ವಸಹಾಯ ಸಂಘ ಮತ್ತು ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುತ್ತಿದೆ.

ಸ್ಥಳೀಯರಿಗೆ ಆಧ್ಯತೆ ನೀಡಿ, ಅವರನ್ನು ಉತ್ತೇಜನೆ ಮತ್ತು ಆ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಇದರ ಉದ್ದೇಶವಾಗಿದೆ.

Click to comment

Leave a Reply

Your email address will not be published. Required fields are marked *

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

Trending